ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಮಳೆ, ತಾಪಮಾನ ಎಷ್ಟಿದೆ?

ಹವಾಮಾನ ಮುನ್ಸೂಚನಾ ಕೇಂದ್ರದ ವರದಿಯಂತೆ ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ ಎಂದು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಯೆಲ್ಲೋ ಅಲರ್ಟ್ ಘೋಷಿಸಿರುವ ನಾಲ್ಕು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆ, ಗಾಳಿಯನ್ನು ನಿರೀಕ್ಷಿಸಲಾಗಿದೆ, ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 83 ಮಿ.ಮೀ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹಲಗೇರಿ ಎಂಬಲ್ಲಿ ದಾಖಲಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಮುಂದಿನ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಏಪ್ರಿಲ್ 30ರಂದು ಬಿದ್ದ ಮಳೆಯ ವಿವರ ಅನ್ವಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 26 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Recommended Video

    ಸಿಎಂ ಬಿಎಸ್ ವೈ ಖಾಸಗಿ ಆಸ್ಪತ್ರೆ ರೌಂಡ್ಸ್ | Oneindia Kannada
    ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

    ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

    ಬೆಂಗಳೂರಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರದಲ್ಲೂ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+