ತಂಪಾದ ಕರ್ನಾಟಕ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ?
ಕರ್ನಾಟಕದ ವಿವಿಧೆಡೆ ಮೇ16ರ ತನಕ ಮಳೆ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅರಬ್ಬಿ ಸಮುದ್ರದ ಚಂಡಮಾರುತದ ಮುನ್ಸೂಚನೆ ಜೊತೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಸುಮಾರು 64 ಮಿ.ಮೀಗೂ ಅಧಿಕ ಮಳೆ ನಿರೀಕ್ಷಿಸಲಾಗಿದೆ. ಮಿಕ್ಕಂತೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 56 ಮಿ.ಮೀ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಭಗವತಿ ಎಂಬಲ್ಲಿ ದಾಖಲಾಗಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ
ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದೆ
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಿದೆ
Recommended Video

ತಗ್ಗಿದ ತಾಪಮಾನ
ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪ್ರತಿದಿನ ಸಂಜೆ ಮಳೆ ನಡುವೆ ಬೆಂಗಳೂರು ನಗರದಲ್ಲಿ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications