ಜೂ 17ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಗಾಳಿ ಮಳೆ ಮುಂದುವರೆದಿದೆ ಜೊತೆಗೆ ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ ಹೀಗಾಗಿ, ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಮಟ್ಟ ಕ್ರಮೇಣ ಏರಿಕೆ ಕಾಣುತ್ತಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಬಸ್ತಿಕೇರಿ ಎಂಬಲ್ಲಿ ಅತ್ಯಧಿಕ 200 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜೂನ್ 17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ
ಬೀದರ್, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂಬ ವರದಿಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+