ನಿಮ್ಮ ನಗರಗಳಲ್ಲಿ ಮೇ 15ರ ಪೆಟ್ರೋಲ್, ಡೀಸೆಲ್ ದರ ಏನಿದೆ?

ಬೆಂಗಳೂರು, ಮೇ 15: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮೇ 14ರ ಶುಕ್ರವಾರ ತೈಲ ದರ ಏರಿಕೆ ಮಾಡಿದ ಬಳಿಕ ಮೇ 15ರ ಶನಿವಾರದಂದು ಬಹುತೇಕ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.34 ರೂಪಾಯಿಗೆ ತಲುಪಿದೆ. ಡೀಸೆಲ್ ದರವೂ ಲೀಟರ್‌ಗೆ 82.95 ರೂಪಾಯಿ ದಾಖಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 95.41 ರೂಪಾಯಿಗೆ ತಲುಪಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.94 ರೂ. ತಲುಪಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್- ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

Whats The Price Of Petrol And Diesel In Your Cities On May 15

Recommended Video

      ಪಾಕಿಸ್ತಾನ ಲೀಗನ್ನು (PSL) IPL ಗೆ ಹೋಲಿಸಬೇಡಿ | Oneindia Kannada
      Whats The Price Of Petrol And Diesel In Your Cities On May 15
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+