ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ

|
Google Oneindia Kannada News

ಬೆಂಗಳೂರು, ಜುಲೈ.15: ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿದ್ದ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾಗಿ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಕ್ರಮ ಕೈಗೊಂಡಿದ್ದು, ಇದುವರೆಗೆ ಒಟ್ಟು 607 ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ. ಆಯ್ಕೆಯಾಗಿರುವ ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಖಾದಿ ಮತ್ತು ಗ್ರಾಮೋದ್ಯೋಗದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಖಾದಿ ಮತ್ತು ಗ್ರಾಮೋದ್ಯೋಗದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ. ಇಲಾಖೆಯಲ್ಲಿ ಒಟ್ಟು 7057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021ನೇ ವರ್ಷದ ಅಂತ್ಯಕ್ಕೆ, ಸುಮಾರು 2627 ಹುದ್ದೆಗಳು ಖಾಲಿಯಾಗಲಿದ್ದು, ಪ್ರಸ್ತುತ ವರ್ಷ 1567 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು: ವಾಕ್ ಇನ್ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು: ವಾಕ್ ಇನ್ ಸಂದರ್ಶನ

1222 Recruitment Letter Issueing for Fire Brigade Candidates

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳ ಸ್ಥಾಪನೆಗೆ ಸರ್ಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಿಂದ ಪಿಯುಸಿ ಹಾಗೂ ಸ್ನಾತಕಪೂರ್ವ ಪದವಿ ಪಾಸಾದವರೂ ಇಲಾಖೆಯ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

English summary
State Home Minister Mr. Araga Gyanendra has directed to issuing the recruitment letters to the candidates who are waiting for recruitment for the vacant posts of Fireman in the State Fire and Emergency Services Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X