10ನೇ ತರಗತಿ ಪಾಸ್ ಆದವರಿಗೆ ಬೆಂಗಳೂರಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜೂನ್ 29 : ಎನ್‌ಯುಎಚ್‌ಎಂ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 6/7/2020ರ ತನಕ ಅವಕಾಶವಿದೆ.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಅಡಿ ಕಿರಿಯ ಪುರುಷ ಆರೋಗ್ಯ ಸಹಾಯಕ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ. ಒಟ್ಟು ಹುದ್ದೆಗಳ ಸಂಖ್ಯೆ 133.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35, ಒಬಿಸಿ ಅಭ್ಯರ್ಥಿಗೆ 38, ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ಇದೆ.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು.
ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವ ಪಿಯುಸಿ ವಿಜ್ಞಾನ ವಿಷಯ ಪಾಸು ಮಾಡಿಡಬೇಕು. ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಕೋರ್ಸ್ ಮಾಡಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂ. ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಮಾರ್ಗಸೂಚಿಗಳಂತೆ ಮೂಲ ದಾಖಲೆಗಳ ಪರೀಕ್ಷೆ ಮತ್ತು ನೇರ ಸಂದರ್ಶನಕ್ಕಾಗಿ ಆಹ್ವಾನಿಸಲಾಗುತ್ತದೆ.
ಈ ಹುದ್ದೆಗಳನ್ನು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಆರ್. ಹೆಚ್. ಸಿ. ಅಧಿಕಾರಿಗಳ ಕಚೇರಿ, ಹಳೇ ಟಿ. ಬಿ. ಆಸ್ಪತ್ರೆ ಆವರಣ, ಹಳೇ ಮದ್ರಾಸ್ ರಸ್ತೆ, ಇಂದಿರಾ ನಗರ, ಬೆಂಗಳೂರು -38 ಇಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು.












Click it and Unblock the Notifications