15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ- ಸಮಯ, ದಿನಾಂಕ, ಮಾಹಿತಿ, ವೆಬ್‌ಸೈಟ್ ಕುರಿತು ತಿಳಿಯಿರಿ
'15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ'
ಬೆಂಗಳೂರು, ಫೆಬ್ರವರಿ 27: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲ ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿದ್ದ ಹೈಕೋರ್ಟ್, ವಿಚಾರಣೆ ನಡೆಸಿತ್ತು. ಕೆಲ ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿದೆ.

ಶಿಕ್ಷಕರ ಆಯ್ಕೆ ಪಟ್ಟಿ ವಿಚಾರವಾಗಿ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಆ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಈ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರನ್ನು ನೇಮಿಸಿಕೊಳ್ಳುವುದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದರು.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವುದಾಗಿ ಬಿಸಿ ನಾಗೇಶ್ ಹೇಳಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಸಿ ನಾಗೇಶ್, '15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ '1:1 ತಾತ್ಕಾಲಿಕ ಆಯ್ಕೆ ಪಟ್ಟಿ'ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ' ಎಂದು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವೀಟಿಗರೊಬ್ಬರು, '#GPSTR 01-02-2023 ರಾಜ್ಯಪತ್ರ ಅನ್ವಯ ಆದರೆ Non HK ಭಾಗದ 500ಕ್ಕೂ ಅಧಿಕ ಆಯ್ಕೆಯಾದ ಭಾವಿ ಶಿಕ್ಷಕರಿಗೆ ಅನ್ಯಾಯವಾಗಲಿದ್ದು, ಈ ರಾಜ್ಯಪತ್ರ ಮುಂದಿನ ನೇಮಕಾತಿಗೆ ಅನ್ವಯಿಸಿ ಅದೇಶಿಸಲು ತಮ್ಮಲ್ಲಿ ಮನವಿ ಮಾಡುತ್ತೇನೆ. ಇಲ್ಲವಾದರೇ ನ್ಯಾಯಕ್ಕಾಗಿ ನ್ಯಾಯಲಯದ ಮೊರೆ ಹೋಗುವ ಅನಿವಾರ್ಯತೆ ಇರುತ್ತದೆ. ಕಾರಣ ನೋಟಿಪಿಕೇಶನ್ ಅಲ್ಲಿ ಇದರ ಬಗ್ಗೆ ಯಾವ ಮಾಹಿತಿ ಇರುವುದಿಲ್ಲ' ಎಂದು ಹೇಳಿದ್ದಾರೆ.
-
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು











Click it and Unblock the Notifications