15,000 ಶಿಕ್ಷಕರ ನೇಮಕಾತಿ; ಸಂಜೆ ಆಯ್ಕೆಪಟ್ಟಿ ಬಿಡುಗಡೆ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮುಖ್ಯ ಆಯ್ಕೆ ಪಟ್ಟಿಯೂ ಇಂದು ಬಿಡುಗಡೆಯಾಗಲಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್‌ ಮಾಡಿದ್ದಾರೆ.

ಬೆಂಗಳೂರು, ಮಾರ್ಚ್ 08; ಕರ್ನಾಟಕ ಸರ್ಕಾರ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಿತ್ತು. ಲಕ್ಷಾಂತರ ಜನರು ಈ ಪರೀಕ್ಷೆಯನ್ನು ಮುಖ್ಯ ಆಯ್ಕೆ ಪಟ್ಟಿಗಾಗಿ ಕಾದು ಕುಳಿತಿದ್ದರು. 6 ರಿಂದ 8ನೇ ತರಗತಿ ಶಿಕ್ಷಕರ ನೇಮಕಾತಿಯ ಮುಖ್ಯ ಆಯ್ಕೆ ಪಟ್ಟಿಯು ವೆಬ್‌ಸೈಟ್‌ನಲ್ಲಿ ಸಂಜೆ ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಬುಧವಾರ ಟ್ವೀಟ್‌ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ಕೊಟ್ಟಿದ್ದಾರೆ.

15,000 Graduate Primary Teachers Recruitment 1:1 main selection list will be released by Today 4 PM

ಕರ್ನಾಟಕ ಸರ್ಕಾರ ಫೆಬ್ರವರಿ 27ರಂದು 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಮತ್ತು ಮಾರ್ಚ್ 4ರ ತನಕ ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಈಗ ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿದ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತಿದೆ.

ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ ಆದೇಶದ ಬಳಿಕ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಗೊಳಿಸಿತ್ತು. ಆ ಪಟ್ಟಿಯನ್ನು ಫೆಬ್ರವರಿ 27ರಂದು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನ ಮಾಡಿತ್ತು. ಈಗ ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಸಿದ್ಧಗೊಳಿಸಿ ಬಿಡುಗಡೆ ಮಾಡಲಾಗುತ್ತಿದೆ.

tweet

ಹೈಕೋರ್ಟ್‌ ಆದೇಶ ಏಕೆ?; 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಪ್ರಕ್ರಿಯೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸಿತ್ತು. ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 2022ರ ನವೆಂಬರ್‌ನಲ್ಲಿ ಪ್ರಕಟಿಸಿತ್ತು. ಆದರೆ, ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿದ್ದ ಹಿನ್ನಲೆ ಕೆಲವು ಅಭ್ಯರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಹಾಕಿದರು. 2023ರ ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಕೋರ್ಟ್‌ ಆದೇಶ ಹೊರಡಿಸಿತು. ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಸೂಚನೆ ನೀಡಿತು.

ಕರ್ನಾಟಕ ಸರ್ಕಾರ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು 9 ತಿಂಗಳಿನಲ್ಲಿ ಪೂರ್ಣಗೊಳಿಸಿತ್ತು. 15 ಸಾವಿರ ಹುದ್ದೆಗಳಿಗೆ ನಡೆದ ಸ್ಮರ್ಧಾತ್ಮಕ ಪರೀಕ್ಷೆ ಬರೆದು 1:1ರ ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ 13,363 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಹಿಂದಿನ ನೇಮಕಾತಿಗೆ ಹೋಲಿಕೆ ಮಾಡಿದರೆ ಅಧಿಕ ಶಿಕ್ಷಕರು ಈ ಬಾರಿ ಆಯ್ಕೆಯಾಗಿದ್ದರು. ಈ ಹಿಂದೆ ನಡೆದ ಪ್ರಕ್ರಿಯೆಯಲ್ಲಿ 3,389 ಮತ್ತು 1994 ಶಿಕ್ಷಕರು ಆಯ್ಕೆಯಾಗಿದ್ದರು.

ಈ ಬಾರಿಯ ಆಯ್ಕೆಯಲ್ಲಿ ಮೂವರು ತೃತೀಯಲಿಂಗಿಗಳು, 19 ಇಂಜಿನಿಯರಿಂಗ್ ಪದವಿ ಪಡೆದವರು ಆಯ್ಕೆಯಾಗಿದ್ದಾರೆ. ವಯೋಮಿತಿ ಸಡಿಲಿಕೆ ಸೇರಿದಂತೆ ನೇಮಕಾತಿ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ತಂದ ಕಾರಣ ಹೆಚ್ಚಿನ ಶಿಕ್ಷಕರು ಆಯ್ಕೆಯಾಗಿದ್ದಾರೆ ಎಂದು ಸಚಿವ ಬಿ. ಸಿ. ನಾಗೇಶ್ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+