
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಬೆಂಗಳೂರು, ಡಿಸೆಂಬರ್ 01; ಬಹುನಿರೀಕ್ಷೆಯ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಮತ್ತೆ ತಡೆ ಉಂಟಾಗಿದೆ. ನೇಮಕ ಪ್ರಕ್ರಿಯೆ ಸಂಬಂಧದ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೆ ಕರ್ನಾಟಕ ಹೈಕೋರ್ಟ್ ಬುಧವಾತರ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.
ಉಡುಪಿಯ ಯಡ್ತಾಡಿಯ ಅನಿತಾ ಮತ್ತಿತರ 24ಮಂದಿ ಅಭ್ಯರ್ಥಿಗಳು 1:2ರಲ್ಲಿ ಆಯ್ಕೆಯಾಗಿ ಅರ್ಹತೆ ಇದ್ದರೂ ಮೀಸಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿ 1:1ರಲ್ಲಿ ಹೆಸರು ಪ್ರಕಟವಾಗದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ರಾಯಚೂರು: ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ತೃತೀಯ ಲಿಂಗಿ ಪೂಜಾ
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಅರ್ಜಿ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರಿ ಶಾಲೆಗಳಿಗೆ ಮೂವರು ಟ್ರಾನ್ಸ್ಜೆಂಡರ್ ಶಿಕ್ಷಕರು ಆಯ್ಕೆ
ಅರ್ಜಿದಾರರು ಮಧ್ಯಂತರ ಪರಿಹಾರವಾಗಿ ಕೋರಿರುವಂತೆ ಅಂತಿಮ ಪಟ್ಟಿಯಲ್ಲಿಅರ್ಜಿದಾರರನ್ನು ಪರಿಗಣಿಸಬೇಕು ಮತ್ತು ಶಿಕ್ಷಣ ಇಲಾಖೆ ಈಗಾಗಲೇ 2022ರ ನವೆಂಬರ್ 18ರಂದು ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ ನಂತರದ ಪ್ರಕ್ರಿಯೆ ಮುಂದುವರಿಸಬಾರದೆಂದು ಕೋರ್ಟ್ ಆದೇಶಿಸಿದೆ.
ಸಾಲ ಮಾಡಿ ಮಕ್ಕಳಿಗೆ ಬಿಸಿಯೂಟ ಬಡಿಸುತ್ತಿರುವ ರಾಯಚೂರು ಶಿಕ್ಷಕರು
ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಕೆಯಲ್ಲಿಉಂಟಾಗಿರುವ ಗೊಂದಲದ ಪರಿಣಾಮ, 1:1ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅರ್ಜಿದಾರರ ವಾದವೇನು?; ಅರ್ಜಿದಾರ ಪರ ವಕೀಲರು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಮೀಸಲು ಮತ್ತು ರೊಟೇಷನ್ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿಲ್ಲ. ಇದು ಕಾನೂನು ಬಾಹಿರವಾಗಿದೆ. ಇದರಿಂದ ಸಾಕಷ್ಟು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹಾಗಾಗಿ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.
ಏಕೆ ಆಕ್ಷೇಪ?: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನ.18ರಂದು ಪ್ರಕಟಿಸಲಾಗಿದ್ದ 1:1ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ.
ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿದೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಜೊತೆಗೆ ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಅಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಆಕ್ಷೇಪಿಸಿರುವ ಅರ್ಜಿದಾರರು, ನ. 18ರಂದು ಪ್ರಕಟಿಸಿರುವ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.