ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್‌

|
Google Oneindia Kannada News

ಬೆಂಗಳೂರು, ಡಿಸೆಂಬರ್ 12; ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಡಗು; ಆಶ್ರಮ ಶಾಲೆಗಳಲ್ಲಿ 11 ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನಕೊಡಗು; ಆಶ್ರಮ ಶಾಲೆಗಳಲ್ಲಿ 11 ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

Job Alert: ಕರ್ನಾಟಕದಲ್ಲಿ15000 ಶಿಕ್ಷಕರ ನೇಮಕಾತಿ: ಅರ್ಹತೆಗಳು ಏನಿರಬೇಕು ಗೊತ್ತಾ? Job Alert: ಕರ್ನಾಟಕದಲ್ಲಿ15000 ಶಿಕ್ಷಕರ ನೇಮಕಾತಿ: ಅರ್ಹತೆಗಳು ಏನಿರಬೇಕು ಗೊತ್ತಾ?

15 Thousand Teachers Recruitment Soon Says Minister BC Nagesh

ಕಲ್ಯಾಣ ಕರ್ನಾಟಕ ವೃಂದದ ಪರವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೆಲ ದಿನದಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್‌ಟಿಸಿ ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್‌ಟಿಸಿ

ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

2022ರ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಉಪನ್ಯಾಸಕರ ಸೇವೆ ಪಡೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ 18 ಸಾವಿರ ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಲ್ಲಿ 5078 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನವೆಂಬರ್ 4ರಂದು ಈ ಕುರಿತು ಈಗಾಗಲೇ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕೋವಿಡ್ ಪರಿಸ್ಥಿತಿ ಬಳಿಕ ಕರ್ನಾಟಕದಲ್ಲಿ ಶಾಲೆಗಳು ಆರಂಭವಾಗಿವೆ. ಭೌತಿಕ ತರಗತಿಗಳು ನಡೆಯುತ್ತಿದ್ದು, ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ತೊಂದರೆಯಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಶಾಲೆಗಳಿಗೆ ನಿಗದಿಗೊಳಿಸಿರುವ ವೃಂದ ಬಲಗಳ ಆಧಾರದ ಮೇಲೆ ಪ್ರತಿ ಶಾಲೆಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗಳ ಕುರಿತು ಶಾಲಾವಾರು ವೃಂದ ಮಂಜೂರಾತಿ ಕ್ರಮಗಳನ್ನು ಈಗಾಗಗೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಮುಖ್ಯವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ/ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮೊದಲ ಆದ್ಯತೆ ನೀಡಲಾಗಿದೆ.

ಎಲ್ಲಾ ಜಿಲ್ಲೆಗಳಿಂದ ತರಿಸಿಕೊಂಡ ಮಾಹಿತಿಯಂತೆ ಪ್ರೌಢ ಶಾಲೆಗಳಲ್ಲಿ ಒಟ್ಟು 5078 ಅತಿಥಿ ಶಿಕ್ಷಕರ ನೇಮಕ್ಕೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದರಲ್ಲಿ 3253 ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿತ್ತು.

ಶಿಕ್ಷಣ ಇಲಾಖೆ ಪುನಃ 1825 ಅತಿಥಿ ಶಿಕ್ಷಕ ಹುದ್ದೆಗಳ ನೇಮಕಾತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅನುಮೋದನೆ ದೊರೆತ ತಕ್ಷಣ ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಲಿದೆ.

ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರೇ ವಹಿಸುವುದು ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ಪ್ರೌಢ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಿಸುವುದು. ಅಗತ್ಯಕ್ಕೆ ತಕ್ಕಂತೆ ಖಾಲಿ ಹುದ್ದೆಗಳಿಗೆ ಎದುರಾಗಿ ವಿಷಯ ಶಿಕ್ಷಕರನ್ನು (ದೈಹಿಕ ಶಿಕ್ಷಕ, ವೃತ್ತ ಶಿಕ್ಷಕರನ್ನು ಹೊರತುಪಡಿಸಿ) ಮಾತ್ರ ನೇಮಿಸುವುದು ಎಂದು ಆದೇಶದಲ್ಲಿ ತಿಳಿಸಿತ್ತು.

Recommended Video

Virat Kohli ಜೊತೆ BCCI ನಡೆದುಕೊಂಡ ರೀತಿಗೆ ಮರುಗಿದ ಪಾಕಿಸ್ತಾನ ಆಟಗಾರರು | Oneindia Kannada

English summary
Karnataka primary and secondary education minister B. C. Nagesh said that 15 thousand teachers recruitment soon for class 6 to 8 in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X