ರಾಜ್ಯ ಸರ್ಕಾರದಲ್ಲಿ 2,76,386 ಲಕ್ಷ ಹುದ್ದೆಗಳು ಖಾಲಿ
Government Jobs: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿವೆ. ಹಾಗಾದ್ರೆ ಯಾವ್ಯಾವ ಇಲಾಖೆಯಲ್ಲಿ ಎಷ್ಟು ಖಾಲಿ ಇವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿ ಇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ನ ರವಿಕುಮಾರಗೌಡ (ಗಣಿಗ) ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಎ ದರ್ಜೆಯ 16,017, ಬಿ ದರ್ಜೆಯ 16,734, ಸಿ ದರ್ಜೆಯ 1,66,021 ಮತ್ತು ಡಿ ದರ್ಜೆಯ 77,614 ಹುದ್ದೆಗಳು ಖಾಲಿಯಿವೆ. ಇನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಅತ್ಯಧಿಕ 70,727 ಹುದ್ದೆಗಳು ಖಾಲಿ ಇವೆ. ಈ ಇಲಾಖೆಯಲ್ಲಿ ಒಟ್ಟು 2,84,086 ಹುದ್ದೆಗಳ ಮಂಜೂರಾತಿ ಇದೆ. ಈ ಪೈಕಿ ಸಿ ದರ್ಜೆಯೊಂದರಲ್ಲೇ 60,219 ಹುದ್ದೆಗಳು ಖಾಲಿಯಿವೆ ಎಂದು ತಿಳಿಸಿದ್ದಾರೆ.

ಗೃಹ ಇಲಾಖೆಯಲ್ಲಿ 26,168, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10,898, ಪಶುಸಂಗೋಪನಾ ಇಲಾಖೆಯಲ್ಲಿ 10,755, ಸಮಾಜ ಕಲ್ಯಾಣ ಇಲಾಖೆಯಲ್ಲಿ 9,980, ಆರ್ಥಿಕ ಇಲಾಖೆಯಲ್ಲಿ 9,536, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 8,334 ಹುದ್ದೆಗಳು ಖಾಲಿಯಿವೆ ಎಂದು ಮಾಹಿತಿ ನೀಡಿದ್ದಾರೆ.
1,161 ಹುದ್ದೆಗಳಿಗೆ ಅರ್ಜಿ ಆಹ್ವಾನ: ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಖಾಲಿಯಿರುವ 1,161 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇದೀಗ ಸಿಐಎಸ್ಎಫ್ ಖಾಲಿರುವ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 05, 2025ರಿಂದ ಆರಂಭವಾಗಲಿದ್ದು, ಏಪ್ರಿಲ್ 3 ಕೊನೆ ದಿನ ಆಗಿದೆ.
ಭಾರತದಲ್ಲಿ ಯಾವುದೇ ಭಾಗದಲ್ಲಿದ್ದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಾದರೂ ಕರ್ತವ್ಯಕ್ಕೆ ಸಿದ್ಧರಿರಬೇಕು. ಕೇಂದ್ರ ಸರ್ಕಾರದ ಭದ್ರತಾ ಸಂಸ್ಥೆಯಡಿ ಉದ್ಯೋಗ ಮಾಡಲು ಇಚ್ಛಿಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಮೊದಲೇ ಸಿದ್ಧಪಡಿಸಿಕೊಳ್ಳುವುದು ಉತ್ತಮ.
ಅರ್ಜಿ ಸಲ್ಲಿಸಬಯಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700ದಿಂದ 69,100 ರೂಪಾಯಿ ಸಂಬಳ ಇರಲಿದೆ. 18 ರಿಂದ 28 ವರ್ಷದದೊಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ, ಒಬಿಸಿ, ಇಡಬ್ಲುಎಸ್ ಅಭ್ಯರ್ಥಿಗಳು 100 ರೂಪಾಯಿ ಪಾವತಿಸಬೇಕು. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇದೆ.












Click it and Unblock the Notifications