Government Jobs: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಹುದ್ದೆಗಳು ಖಾಲಿ; ವಿಭಾಗವಾರು ಅಂಕಿಅಂಶಗಳ ವಿವರ ಇಲ್ಲಿದೆ
Government Jobs: ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಧಿಕೃತ ಮಾಹಿತಿಯೊಂದು ತಿಳಿಸಿದೆ. ಹಾಗಾದರೆ ಯಾವ್ಯಾವ ಹುದ್ದೆಗಳು ಎಷ್ಟು ಖಾಲಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ತಿಳಿದುಬಂದಿದೆ.

ಶಿಕ್ಷಣ ಇಲಾಖೆಯಲ್ಲಿ 70,727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ. ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು (ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ) ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4,673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವ ಹೋಗಿರುವುದಾಗಿ ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ಕೆಲಸಕ್ಕೆ ಸೇರುವ ನೌಕರರು ಕೆಲವು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಸಿವಿಲ್ ಸೇವಾ ನಡತೆ ನಿಯಮಗಳಲ್ಲಿ ಸರ್ಕಾರಿ ನೌಕವರರು ಹೇಗೆ ಇರಬೇಕೆಂದು ತಿಳಿಸಲಾಗಿರುತ್ತದೆ. ಅದಕ್ಕೆ ಸಂಬಂಧಪಟ್ಟ ಒಂದಿಷ್ಟು ಮಾಹಿತಿ ಇಲ್ಲಿದೆ.
* ಪ್ರತಿಯೊಬ್ಬ ಸರ್ಕಾರಿ ನೌಕರನು ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು,
* ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು
* ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ;
* ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ
* ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು
* ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು
* ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು.
* ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು
* ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ;
* ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು.
ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ ನಿಯಂತ್ರಣಕ್ಕೆ ಮತ್ತು ಅಧಿಕಾರಕ್ಕೆ ಒಳಪಟ್ಟಿರುವ ಎಲ್ಲಾ ಸರ್ಕಾರಿ ನೌಕರರ ನೀತಿ ನಿಷ್ಠೆಯನ್ನು ಮತ್ತು ಕರ್ತವ್ಯ ಶ್ರದ್ಧೆಯನ್ನು ಸುನಿಶ್ಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.
* ಪ್ರತಿಯೊಬ್ಬ ಸರ್ಕಾರಿ ನೌಕರನು, ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಸೌಜನ್ಯಯುತವಾದ ವರ್ತನೆಯನ್ನು ಹೊಂದಿರಬೇಕಾಗುತ್ತದೆ.
* ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸರ್ವೋಚ್ಛತೆಗೆ ಸ್ವತಃ ಬದ್ಧನಾಗಿರತಕ್ಕದ್ದು ಮತ್ತು ಎತ್ತಿ ಹಿಡಿಯಬೇಕಾಗುತ್ತದೆ.
* ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆ, ರಾಷ್ಟ್ರದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಯನ್ನು ಸಮರ್ಥಿಸತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು.
* ಸಾರ್ವಜನಿಕ ಹಿತದೃಷ್ಠಿಯಿಂದ ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಮತ್ತು ಮಿತವ್ಯಯಕರವಾಗಿ ಬಳಸತಕ್ಕದ್ದು ಅಥವಾ ಬಳಸುವಂತೆ ಮಾಡತಕ್ಕದ್ದು.
* ತನ್ನ ಸಾರ್ವಜನಿಕ ಕರ್ತವ್ಯಗಳಿಗೆ ಸಂಬಂಧಿಸಿದ ಯಾವುದೇ ಖಾಸಗಿ ಹಿತಾಸಕ್ತಿಯನ್ನು ಘೋಷಿಸತಕ್ಕದ್ದು ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಸಂರಕ್ಷಿಸುವಂಥ ರೀತಿಯಲ್ಲಿ ಯಾವುದೇ ಬಿಕ್ಕಟ್ಟುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳತಕ್ಕದ್ದು.
* ತನ್ನ ಪದೀಯ ಕರ್ತವ್ಯಗಳ ನಿರ್ವಹಣೆಯಲ್ಲಿ ತನ್ನ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರ ಆಮಿಷಗಳಿಗೆ ಒಳಗಾಗಬಾರದು.
* ನಾಗರಿಕ ಸೇವಾ ನೌಕರನಾಗಿ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳಬಾರದು ಮತ್ತು ಸ್ವಂತಕ್ಕಾಗಿ, ತನ್ನ ಕುಟುಂಬಕ್ಕಾಗಿ ಅಥವಾ ತನ್ನ ಸ್ನೇಹಿತರಿಗಾಗಿ ಹಣಕಾಸು ಅಥವಾ ಬಹು ಮುಖ್ಯ ಪ್ರಯೋಜನಗಳನ್ನು ದೊರಕಿಸಿಕೊಡುವ ಉದ್ದೇಶದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು.
* ಅರ್ಹತೆಯ ಆಧಾರದ ಮೇಲೆ ಮಾತ್ರವೇ ಆಯ್ಕೆಗಳನ್ನು ಮಾಡ ತಕ್ಕದ್ದು. ನಿರ್ಣಯಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಶಿಫಾರಸ್ಸುಗಳನ್ನು ಮಾಡಬೇಕಾಗುತ್ತದೆ.
* ನ್ಯಾಯಸಮ್ಮತವಾಗಿ ಮತ್ತು ನಿಷ್ಪಕ್ಷಪಾತದಿಂದ ಕಾರ್ಯನಿರ್ವಹಿಸತಕ್ಕದು ಹಾಗೂ ಯಾವುದೇ ವ್ಯಕ್ತಿಯ ಅಥವಾ ಪಕ್ಷದ ವಿರುದ್ಧ ತಾರತಮ್ಯ ಮಾಡಬಾರದು.
* ಯಾವುದೇ ಕಾನೂನು, ನಿಯಮಗಳು, ವಿನಿಯಮಗಳು ಮತ್ತು ಸ್ಥಾಪಿತ ಪದ್ಧತಿಗಳಿಗೆ ವಿರುದ್ಧವಾಗಿರುವ ಅಥವಾ ವಿರುದ್ಧವಾಗಿರಬಹುದಾದ ಯಾವುದೇ ಕಾರ್ಯ ಮಾಡುವುದನ್ನು ನಿಬರ್ಂಧಿಸಬೇಕಾಗುತ್ತದೆ.* ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ತನಗೆ ಯುಕ್ತವಾಗಿ ತಿಳಿಸಲಾದ ಕಾನೂನುಬದ್ಧ ಆದೇಶಗಳನ್ನು ಜಾರಿಗೊಳಿಸಲು ಬದ್ಧನಾಗಿರಾಗಿಬೇಕು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications