ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಖಾಲಿ, ಯಾವ ಇಲಾಖೆಯಲ್ಲಿ ಎಷ್ಟಿದೆ?

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಉಳಿದಿವೆ ಎಂದು ತಿಳಿದುಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇವೆ ಎಂಬ ವಿಚಾರದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಿದೆ.

ಅದರಂತೆ ಶಾಲಾ ಶಿಕ್ಷಣ 70,727 ಹುದ್ದೆಗಳು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069, ಗೃಹ ಇಲಾಖೆಯಲ್ಲಿ 26,168 ಉದ್ಯೋಗಗಳು, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227 ಹುದ್ದೆಗಳು, ಕಂದಾಯ ಇಲಾಖೆಯಲ್ಲಿ 11,145 ಹುದ್ದೆಗಳು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು, ಪಶುಸಂಗೋಪನೆ ಇಲಾಖೆಯಲ್ಲಿ 10,755 ಹುದ್ದೆಗಳು ಸೇರಿದಂತೆ ಗುತ್ತಿಗೆ ಆಧಾರದ ಮೇಲೆ 96,000 ಜನರಿಗೆ ಕೆಲಸಗಳು ಖಾಲಿ ಇವೆ ಎನ್ನಲಾಗಿದೆ.

2 76 Lakh Vacancies in Karnataka Government Departments Official Data

ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ?

1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-8334,
2. ಸಹಕಾರ ಇಲಾಖೆ-4885
3. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ-6191
4. ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ-6
5. ಇ-ಆಡಳಿತ ಇಲಾಖೆ-71
6. ಇಂಧನ ಇಲಾಖೆ-247
7. ಆರ್ಥಿಕ ಇಲಾಖೆ-9536
8. ಮೀನುಗಾರಿಕೆ ಇಲಾಖೆ-859
9. ಆಹಾರ ಮತ್ತು ನಾಗರಿಕ ಸರಬರಾಜು-1395
10. ಅರಣ್ಯ ಇಲಾಖೆ-6337
11. ಕೈಮಗ್ಗ ಮತ್ತು ಜವಳಿ ಇಲಾಖೆ-50
12. ಒಳಾಡಳಿತ ಇಲಾಖೆ-26168
13. ತೋಟಗಾರಿಕೆ ಇಲಾಖೆ-2969
14. ವಾರ್ತಾ ಇಲಾಖೆ-328
15. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ-61
16. ಕನ್ನಡ ಮತ್ತು ಸಂಸ್ಕೃತಿ ಇಲಾಖೆ-432
17. ಕಾರ್ಮಿಕ ಇಲಾಖೆ-2613
18. ಕಾನೂನು, ನ್ಯಾಯ, ಮಾನವ ಹಕ್ಕುಗಳ ಇಲಾಖೆ-7853
19. ಭಾರಿ ಮತ್ತು ಮಧ್ಯಮ ಕೈಗಾರಿಕೆ-379
20. ಭಾರಿ ನೀರಾವರಿ-601
21. ಗಣಿ-653
22. ಸಣ್ಣ ನೀರಾವರಿ-1237
23. ಅಲ್ಪಸಂಖ್ಯಾತರ ಕಲ್ಯಾಣ-4159
24. ಸಂಸದೀಯ ವ್ಯವಹಾರಗಳು-508
25. ಕಂದಾಯ ಇಲಾಖೆ-11145
26. ಪರಿಶಿಷ್ಟ ಜಾತಿಗಳ ಕಲ್ಯಾಣ-9980
27. ಕೃಷಿ ಇಲಾಖೆ-6773 ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೆಲಸ ಖಾಲಿ ಇವೆ.

ವಿಧಾನಸಭೆಯಲ್ಲಿ ಅಧಿವೇಶನದಲ್ಲಿ ಈ ಖಾಲಿ ಹುದ್ದೆಗಳ ಬಗ್ಗೆ ಚರ್ಚೆಯಾಗಿದೆ. ಅದರಂತೆ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಮಾಹಿತಿಯನ್ನು ಹಂಚಿಕೊಂಡಿದೆ. ಅದರಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದು, ಇದನ್ನು ಶೀಘ್ರವೇ ಭರ್ತಿ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

2 76 Lakh Vacancies in Karnataka Government Departments Official Data

ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಿಎಂ

ಇನ್ನು ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹೇಳಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು ಮೂವರು ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+