• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸರಕಾರಿ ಶಾಲೆಗಳಿಗೆ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ

|
Google Oneindia Kannada News

ಬೆಂಗಳೂರು, ನ.6: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ. 2022ರ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ನ.4ರಂದು ಆದೇಶ ಹೊರಡಿಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದು, ಸರ್ಕಾರಿ ಆದೇಶ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ.

ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿ ಇರುವುರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ, ತಾಲ್ಲೂಕಿನ ಒಳಗೆ ಖಾಲಿ ಇರುವ ಹುದ್ದೆಯಲ್ಲಿ ಮುಂದುವರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಓ) ಸೂಚನೆ ನೀಡಲಾಗಿದೆ.

ಮಾಸಿಕ ಗೌರವ ಸಂಭಾವನೆ

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತಿ ತಿಂಗಳಿಗೆ 7,500 ರೂ. ಹಾಗೂ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವವರಿಗೆ ಪ್ರತಿ ತಿಂಗಳಿಗೆ 8,000 ರೂ. ಗೌರವ ಸಂಭಾವನೆ ನಿಗದಿ ಮಾಡಲಾಗಿದೆ.

ನೇಮಕಗೊಂಡ ತಾಲ್ಲೂಕುವಾರು ಅತಿಥಿ ಶಿಕ್ಷಕರ ಮಾಹಿತಿಯನ್ನು ಕ್ರೂಢೀಕರಿಸಿ ಜಿಲ್ಲೆಯಿಂದ ಅನುದಾನ ಬಿಡುಗಡೆಗೆ ವಿವರಗಳನ್ನು ಸಲ್ಲಿಸಬೇಕು. ತಾಲ್ಲೂಕುವಾರು ಬೇಡಿಕೆಯನ್ನು ಆಧರಿಸಿ ತಾಲ್ಲೂಕು ಪಂಚಾಯತ್‌ಗಳಿಗೆ ನೇರವಾಗಿ ಆರ್ಥಿಕ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿದೆ.

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ನೇಮಕದ ಷರತ್ತುಗಳು:

* ತಾಲ್ಲೂಕುವಾರು ಅತಿಥಿ ಶಿಕ್ಷಕರ ಬೇಡಿಕೆಯನ್ನು ಆಧರಿಸಿ ಅಗತ್ಯವಿರುವ ಹುದ್ದೆಗಳ ಸಂಖ್ಯೆಯನ್ನು ಹಂಚಿಕೆ ಮಾಡಲಾಗಿದೆ. ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ಶೀಘ್ರವಾಗಿ ನೇಮಕಾತಿ ಮಾಡಲು ಅಗತ್ಯ ಕ್ರಮ ವಹಿಸಬೇಕು.

* ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರೇ ನೋಡಿಕೊಳ್ಳಬೇಕು.

* ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಖಾಲಿ ಇರುವ ಹುದ್ದೆಗಳಿಗೆ/ ಶಿಕ್ಷಕ ರಹಿತ ಶಾಲೆಗಳಿಗೆ, ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯ ಖಾಲಿ ಹುದ್ದೆಗಳಿಗೆ ಆದ್ಯತೆ ನೀಡಿ ಭರ್ತಿ ಮಾಡಬೇಕು

* ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಬೇಕು

* ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು

ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕದ ಷರತ್ತುಗಳು:

* ಸರಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಕ್ಕೆ ಆದ್ಯತೆ ನೀಡಬೇಕು

* ಅತಿಥಿ ಶಿಕ್ಷಕರು ಇರುವಲ್ಲಿ ವರ್ಗಾವಣೆ ಮೂಲಕ ಕಾಯಂ ಶಿಕ್ಷಕರು ನೇಮಕವಾದಲ್ಲಿ ಅತಿಥಿ ಶಿಕ್ಷಕರನ್ನು ತಾಲ್ಲೂಕು ವ್ಯಾಪ್ತಿಯೊಳಗಿನ ಶಾಲೆಗೆ ವರ್ಗಾಯಿಸಬೇಕು

* ಅತಿಹೆಚ್ಚು ಮಕ್ಕಳು ಮತ್ತು ಕಡಿಮೆ ಶಿಕ್ಷಕರು ಇರುವಂತಹ ಶಾಲೆಗಳನ್ನು ಗುರುತಿಸಿ ಅಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಬೇಕು

* ಜಿಲ್ಲಾ ಉಪನಿರ್ದೇಶಕರು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತ ಗಮನಿಸಿ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡಬೇಕು

* ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಇರುವಂತಹ ಅತಿಥಿ ಶಿಕ್ಷಕರ ನೇಮಕ ಮಾಡಬೇಕು

   ಚೀನಾದಿಂದ ಬೇರೆ ರಾಷ್ಟ್ರಕ್ಕೂ ತೊಂದರೆ | Oneindia Kannada
   English summary
   23,078 guest teachers have been temporarily ordered to reduce the shortage of teachers in the state's primary and secondary schools.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   Desktop Bottom Promotion