ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

7ನೇ ವೇತನ ಆಯೋಗ, ಸರ್ಕಾರದ ಮತ್ತೊಂದು ಆದೇಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02; ಕರ್ನಾಟಕ ಸರ್ಕಾರ ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಿ ಆದೇಶ ಹೊರಡಿಸಿದೆ. ಸುಧಾಕರ್ ರಾವ್ ಅಧ್ಯಕ್ಷರಾಗಿರುವ ಆಯೋಗಕ್ಕೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ.

ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರದ ಉಪ ಕಾರ್ಯದರ್ಶಿ ಉಮಾ ಕೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 19/11/2022ರ ಸರ್ಕಾರಿ ಆದೇಶದಲ್ಲಿ ರಚಿಸಲಾದ 7ನೇ ರಾಜ್ಯ ವೇತನ ಆಯೋಗದ ಕಾರ್ಯ ನಿರ್ವಹಣೆಗಾಗಿ ಪೂರಕವಾಗಿ ಹೊಸ ಹುದ್ದೆಗಳನ್ನುಸೃಜಿಸುವ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

7th Pay Commission; ಸರ್ಕಾರದ ಆದೇಶ, ನೌಕರರ ನಿರೀಕ್ಷೆಗಳು7th Pay Commission; ಸರ್ಕಾರದ ಆದೇಶ, ನೌಕರರ ನಿರೀಕ್ಷೆಗಳು

ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು 19/11/2022ರ ಸರ್ಕಾರಿ ಆದೇಶದಲ್ಲಿ ಅಧ್ಯಕ್ಷರನ್ನೂ ಒಳಗೊಂಡಂತೆ ತ್ರಿಸದಸ್ಯ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ.

ಸರ್ಕಾರಿ ನೌಕರರಿಗೆ ಸಿಹಿಸುದ್ದಿ; 7ನೇ ವೇತನ ಆಯೋಗಕ್ಕೆ ಅಧ್ಯಕ್ಷರ ನೇಮಕ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; 7ನೇ ವೇತನ ಆಯೋಗಕ್ಕೆ ಅಧ್ಯಕ್ಷರ ನೇಮಕ

ದಿನಾಂಕ 28/11/2022ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಷರತ್ತು ಮತ್ತು ನಿಬಂಧನೆಗಳನ್ನು ಹೊರಡಿಸಲಾಗಿರುತ್ತದೆ. ವೇತನ ಆಯೋಗದ ಕಾರ್ಯನಿರ್ವಹಣೆಗೆ ಪೂರಕವಾಗಿ ಹೊಸ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲಿಸಿರುತ್ತದೆ. ಆದೇಶವನ್ನು ಹೊರಡಿಸಿದೆ ಎಂದು ತಿಳಿಸಲಾಗಿದೆ.

44 Post Recruitment For 7th Pay Commission Karnataka

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 7ನೇ ರಾಜ್ಯ ವೇತನ ಆಯೋಗಕ್ಕೆ ಈ ಕೆಳಕಂಡ 44 ಹುದ್ದೆಗಳನ್ನು ಸೃಜಿಸಲು ಸರ್ಕಾರವು ಮಂಜೂರಾತಿ ನೀಡಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ: 7ನೇ ವೇತನ ಆಯೋಗ ರಚನೆ ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ: 7ನೇ ವೇತನ ಆಯೋಗ ರಚನೆ

ಹುದ್ದೆಗಳ ವಿವರಗಳು; ಕಾರ್ಯದರ್ಶಿ (ಐಎಎಸ್ ವೃಂದ) 1, ಅಪರ/ ಜಂಟಿ/ ಉಪ ಕಾರ್ಯದರ್ಶಿ/ ವಿಶೇಷಾಧಿಕಾರಿ 3, ಜಂಟಿ/ ಉಪ/ ಸಹಾಯಕ ನಿರ್ದೇಶಕರು (ಅಂಕಿ-ಅಂಶ) 1, ಅಧೀನ ಕಾರ್ಯದರ್ಶಿ/ ಆಪ್ತ ಕಾರ್ಯದರ್ಶಿ 6, ಶಾಖಾಧಿಕಾರಿ 2, ಹಿರಿಯ ಸಹಾಯಕರು/ ಸಹಾಯಕರು/ ಶೀಘ್ರಪಿಲಿಗಾರರು/ ಕಿರಿಯ ಸಹಾಯಕರು/ ಬೆರಳಚ್ಚುಗಾರರು/ ಡಾಟಾ ಎಂಟ್ರಿ ಆಪರೇಟರ್ ಹಾಗೂ ಇತರೆ ಗ್ರೂಪ್ ಸಿ ವೃಂದದ ಹುದ್ದೆಗಳು 25, ದಲಾಯತ್ 6 ಹುದ್ದೆ ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ.

ವೇತನ ಆಯೋಗವು ಶೀಘ್ರದಲ್ಲಿ ಕಾರ್ಯಾರಂಭ ಮಾಡುವುದಕ್ಕೆ ಅನುಕೂಲವಾಗುವಂತ ಮೇಲ್ಕಂಡ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಸುಲಭವಾಗಿ ಹೊಂದಿಕೊಳ್ಳುವ ಮತ್ತು ಕಾರ್ಯ ನಿರ್ವಹಣೆಯಲ್ಲಿ ಅಂತ‌ ವಿನಿಮಯತಯ ದೃಷ್ಟಿಯಿಂದ ಅವರ/ ಜಂಟಿ / ಉಪ ಕಾರ್ಯದರ್ಶಿ / ವಿಶೇಷಾಧಿಕಾರಿ ಹುದ್ದೆಗಳನ್ನು ಸೃಜಿಸಲಾಗಿರುತ್ತದೆ. ಗ್ರೂಪ್-ಸಿ ವೃಂದದ ಹುದ್ದೆಗಳನ್ನು ಒಟ್ಟಾರೆ ಸೃಜಿಸಲಾಗಿದ್ದು, ವೇತನ ಆಯೋಗವು ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸ್ವಾತಂತ್ರವನ್ನು ಕಲ್ಪಿಸಲಾಗಿರುತ್ತದೆ.

7ನೇ ರಾಜ್ಯ ವೇತನ ಆಯೋಗದ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2052-00-092-0-07 ಕರ್ನಾಟಕ ವೇತನ ಆಯೋಗ ರಡಿಯಲ್ಲಿ ಭರಿಸತಕ್ಕದ್ದು. ಲೆಕ್ಕ ಶೀರ್ಷಿಕೆ 2052-00-092-0-07 ಕರ್ನಾಟಕ ವೇತನ ಆಯೋಗ ಇದಕ್ಕೆ ಸಂಬಂಧಿಸಿದಂತೆ, ಉಪ ಕಾರ್ಯದರ್ಶಿ. 7ನೇ ರಾಜ್ಯ ವೇತನ ಆಯೋಗ, ಇವರು ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಯನ್ನಾಗಿ ಪ್ರಾಧಿಕರಿಸಲಾಗಿದೆ.

7ನೇ ರಾಜ್ಯ ವೇತನ ಆಯೋಗಕ್ಕೆ ಸೃಜಿಸಲಾದ ಈ ಮೇಲಿನ ಹುದ್ದೆಗಳನ್ನು ಆಯೋಗದ ಅವಧಿಯವರೆಗೆ ತಾತ್ಕಾಲಿಕವಾಗಿ ಸೃಜನ ಮಾಡಲಾಗಿರುತ್ತದೆ. ಸೃಜಿಸಲಾದ ಹುದ್ದೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕರ್ನಾಟಕ ಸರ್ಕಾರದ ಸಚಿವಾಲಯದ ಸೇವೆಯಿಂದ ಅಥವಾ ಸರ್ಕಾರದ ಇನ್ನಿತರ ಇಲಾಖೆಗಳಿಂದ ನಿಯೋಜನೆ ಮೇಲೆ ಭರ್ತಿ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವೇತನ ಆಯೋಗದ ವಿವರ

* ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು
* ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ ಸದಸ್ಯರು
* ಮೂಲಸೌಲಭ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿ

English summary
Karnataka government formed 7th pay commission lead by Sudhakar Rao. Now fiance department approved for 44 post recruitment for commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X