ಈ ವರ್ಷ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5982 ಹುದ್ದೆ ಭರ್ತಿ

ಬೆಂಗಳೂರು, ಸೆಪ್ಟೆಂಬರ್ 13 : 2019ರ ಅಂತ್ಯದೊಳಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 5,982 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಈ ಕುರಿತು ಹೈಕೋರ್ಟ್‌ಗೆ ಸರ್ಕಾರ ಪ್ರಮಾಣ ಪತ್ರವನ್ನು ಸಲ್ಲಿಸಿದೆ.

ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸುಮೋಟೋ ಪ್ರಕರಣವನ್ನು ದಾಖಲು ಮಾಡಿಕೊಂಡಿದೆ. ಈ ಪ್ರಕರಣದ ವಿಚಾರಣೆ ವೇಳೆ ಗೃಹ ಇಲಾಖೆ 16,838 ಹುದ್ದೆ ಖಾಲಿ ಇದ್ದು, 5, 982 ಹುದ್ದೆ ಈ ವರ್ಷ ಭರ್ತಿಯಾಗಲಿದೆ ಎಂದು ಹೇಳಿದೆ.

2020ರ ಮಾರ್ಚ್‌ನೊಳಗೆ 615 ಪಿಎಸ್‌ಐ, 4540 ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 2021ಮಾರ್ಚ್‌ನೊಳಗೆ 592 ಪಿಎಸ್‌ಐ, 4 ಸಾವಿರ ಪೇದೆಗಳು, 2022ರ ಮಾರ್ಚ್‌ನೊಳಗೆ 543 ಪಿಎಸ್‌ಐ, 566 ಪೇದೆಗಳ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಸರ್ಕಾರ ಪ್ರಮಾಣ ಪತ್ರದಲ್ಲಿ ತಿಳಿಸಿದೆ.

5982 Post Recruitment In Police Department In 2019

ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಡಿಸೆಂಬರ್ 2ರೊಳಗೆ ವರದಿಯನ್ನು ನೀಡುವಂತೆ ಸೂಚನೆ ನೀಡಿದೆ. ಮೊದಲ ಹಂತದ ನೇಮಕಾತಿ ಬಗ್ಗೆ ಅಕ್ಟೋಬರ್‌ನಲ್ಲಿ ವರದಿ ನೀಡಲಾಗುತ್ತದೆ ಎಂದು ಗೃಹ ಇಲಾಖೆ ಹೇಳಿದೆ.

ಕರ್ನಾಟಕ ಸರ್ಕಾರ ಗೃಹ ಇಲಾಖೆಯಲ್ಲಿ 850 ಸಬ್ ಇನ್ಸ್‌ಪೆಕ್ಟರ್ ಮತ್ತು 8 ಸಾವಿರ ಪೊಲೀಸ್ ಪೇದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದೆ. ಬೆಂಗಳೂರು ಸಿಟಿ ಕಮೀಷನರೇಟ್ ವ್ಯಾಪ್ತಿಯಲ್ಲಿಯೇ 800 ಸಿವಿಲ್ ಮತ್ತು 500 ಸಶಸ್ತ್ರ ಪೊಲೀಸ್ ಪೇದೆಗಳ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+