ಎಎಐನಲ್ಲಿ 372 ಹುದ್ದೆಗಳ ಭರ್ತಿ, ಪದವೀಧರರು ಅರ್ಜಿ ಹಾಕಿ
Recommended Video

ಬೆಂಗಳೂರು, ಡಿಸೆಂಬರ್ 03 : ಎಎಐ 372 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15/12/2018 ಕೊನೆಯ ದಿನವಾಗಿದೆ.
ಎಎಐ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್ 372 ಸೆಕ್ಯುರಿಟಿ ಸ್ಕ್ರೀನರ್ಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದದರೂ ವಿಷಯದಲ್ಲಿ ಮೂರು ವರ್ಷದ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಹಿಂದಿ, ಇಂಗ್ಲಿಶ್ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಮಾತನಾಡುವ ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವವರಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 - 30,000 ವಯೋಮಿತಿ ನಿಗದಿಗೊಳಿಸಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications