ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಮಹತ್ವ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 14: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ವಿಧಾನಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದ್ದು, ಸದರಿ ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿಯಡಿ ಭರ್ತಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇಲಾಖೆಯಲ್ಲಿ ಕಾಲಕಾಲಕ್ಕೆ ಖಾಲಿಯಾಗುವ ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ, ಮುಂಬಡ್ತಿ, ಗುತ್ತಿಗೆ ಆಧಾರದಡಿ, ವರ್ಗಾವಣೆ ಮೂಲಕ ಭರ್ತಿ ಮಾಡುವ ಮೂಲಕ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Action Taken To Fill Vacant Posts In The Health Department Dinesh Gundu Rao

2017-18 ಮತ್ತು 2019-20ನೇ ಸಾಲಿನಲ್ಲಿ ರಾಜ್ಯದಲ್ಲಿ 62 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದ್ದು, ಇದರಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕು ಸಹ ಒಳಗೊಂಡಿರುತ್ತದೆ. ಹೊಸದಾಗಿ ರಚಿಸಲಾದ 62 ತಾಲ್ಲೂಕುಗಳಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದ್ದು ಆರ್ಥಿಕ ಇಲಾಖೆ ಸಹಮತಿ ಸ್ವೀಕೃತವಾದ ಕೂಡಲೇ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಹೊಸ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗೆ ಹುದ್ದೆ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ.ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಘವೇಂದ್ರ ಬಸವರಾಜ್ ಹಿಟ್ನಾಳ್ ಕೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಕಾಲಾಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2000 ಹುದ್ದೆಗಳ ಭರ್ತಿಗೆ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿರುತ್ತವೆ. ಅದರಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ. ಅರಸೀಕೆರೆ ಮತ್ತು ದೇವದುರ್ಗ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಹೊಸ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು 11-07-2024ರಲ್ಲಿ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ವರದಿಯನುಸಾರ ಮುಂದಿನ ಕ್ರಮ ವಹಿಸಲಾಗುವುದು ಎಂದರು. ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ತಳಕಲ್ ನಲ್ಲಿ ವಿಟಿಯು ನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+