ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್‌ಟಿಸಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 09; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕೇಂದ್ರ ಕಚೇರಿ ನೇಮಕಾತಿಗಳ ಬಗ್ಗೆ ಮಾಹಿತಿ ನೀಡಿದೆ. ಅಧಿಸೂಚನೆ ಹೊರಡಿಸಿದ್ದ ವಿವಿಧ ನೇಮಕಾತಿಗಳನ್ನು ಕೋವಿಡ್ ಪರಿಸ್ಥಿತಿಯ ಕಾರಣ ತಡೆಹಿಡಿಯಲಾಗಿತ್ತು.

ಈಗ ಕೆಎಸ್ಆರ್‌ಟಿಸಿ ಕರಾರಸಾ ನಿಗಮದಲ್ಲಿನ ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದೆ. ಕೋವಿಡ್ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿರುವ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಲು 15/9/2021ರಂದು ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ಹೇಳಿದೆ.

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ

ಈ ಕುರಿತು ಅನುಮತಿ ಬಂದ ಕೂಡಲೇ ಮೇಲ್ಕಂಡ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗುತ್ತದೆ. ನೇಮಕಾತಿ ಕುರಿತು ದಿನಪತ್ರಿಕೆಗಳಲ್ಲಿ, ನಿಗಮದ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.

3000 ಪರವಾನಗಿ ಭೂಮಾಪಕರ ನೇಮಕಾತಿ ಆದೇಶ ವಾಪಸ್! 3000 ಪರವಾನಗಿ ಭೂಮಾಪಕರ ನೇಮಕಾತಿ ಆದೇಶ ವಾಪಸ್!

After Covid Pandemic KSRTC Clarification On Recruitment Process

ಯಾವ ನೇಮಕಾತಿ; ಜಾಹೀರಾತು ಸಂಖ್ಯೆ 1/2018 & 2/2018ರ ಅನ್ವಯ 726 ತಾಂತ್ರಿಕ ಸಹಾಯಕ ಮತ್ತು 200 ಕರಾಸಾ ಪೇದೆ ಹುದ್ದೆಗಳಿಗೆ ಹಾಗೂ ಜಾಹೀರಾತು ಸಂ. 1/2020ರ ಅನ್ವಯ 3745 ಚಾಲನಾ ಸಿಬ್ಬಂದಿ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ

ಆದರೆ ಕೋವಿಡ್ ಪರಿಸ್ಥಿತಿ ಕಾರಣ ಕರ್ನಾಟಕ ಸರ್ಕಾರದ ಸೂಚನೆ ಹಿನ್ನಲೆಯಲ್ಲಿ ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಕೋವಿಡ್ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿರುವ ಹಿನ್ನಲೆಯಲ್ಲಿ ಪುನಃ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ಮಹಿಳೆಯರಿಗೆ ವಿವಿಧ ತರಬೇತಿ; ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 27/12/2021 ರಿಂದ 30 ದಿನಗಳ ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ಮತ್ತು 30/12/2021 ರಿಂದ 30 ದಿನಗಳ ಮಹಿಳೆಯರ ಟೈಲರಿಂಗ್ ಕುರಿತು ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿ ಅವಧಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ಪ್ರಯೋಗಿಕವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರು. ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯನ್ನು ಖಾಲಿ ಹಾಳೆಯಲ್ಲಿ ಬರೆದು ಸಲ್ಲಿಸಬೇಕು.

ಅರ್ಜಿಯನ್ನು 25/12/2021ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, (CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ 576104 ಇಲ್ಲಿಗೆ ಕಳುಹಿಸುವುದು.

ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಆಸಕ್ತ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸುವುದು. ದೂರವಾಣಿ ಮುಖಾಂತರವೂ ತರಬೇತಿಗೆ ಹೆಸರು ನೋಂದಾಯಿಸಬಹುದಾಗಿದೆ. ಗ್ರ್ರಾಮೀಣ ಪ್ರದೇಶದ ಬಿಪಿಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 0820-2570455, 9449862665.

ತರಬೇತುದಾರರಿಂದ ಅರ್ಜಿ ಆಹ್ವಾನ; ನಾಪೋಕ್ಲು ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ (ಪ್ರಸ್ತುತ ಕೆವಿಜಿ ಕಟ್ಟಡ ಭಾಗಮಂಡಲ) ಇಲ್ಲಿ 8ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ (ಕರಾಟೆ) ನೀಡಲು ನುರಿತ ಅರ್ಹ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮಾನ್ಯತೆ ಪಡೆದ ಸ್ವಯಂ ರಕ್ಷಣಾ ಕೌಶಲ್ಯಗಳ ಸಂಸ್ಥೆಗಳಿಂದ ತರಬೇತಿ ಪಡೆದ ನುರಿತ ಮತ್ತು ಅರ್ಹ ಮಹಿಳಾ ತರಬೇತುದಾರರು ಅರ್ಜಿ ಸಲ್ಲಿಸಬಹುದು.

Recommended Video

ಭಾರತ ಸೇನೆಗೆ ಬಿಪಿನ್ ರಾವತ್ ಕೊಟ್ಟ ಕೊಡುಗೆ ಏನೇನು ಗೊತ್ತಾ? | Oneindia Kannada

ಆಸಕ್ತ ಸ್ವಯಂ ರಕ್ಷಣಾ ಕೌಶಲ್ಯ (ಕರಾಟೆ) ತರಬೇತುದಾರರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-228985 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ. ಎಸ್. ಗುರುಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
In a press release Karnataka State Road Transport Corporation (KSRTC) clarification about recruitment process which stopped in the time of Corona pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X