Agnipath Recruitment: ಆಗಸ್ಟ್ 22 ರಿಂದ 31 ರವರೆಗೆ ಅಗ್ನಿಪಥ ಸೇನಾ ನೇಮಕಾತಿ ರ‍್ಯಾಲಿ
ಧಾರವಾಡ, ಆಗಸ್ಟ್ 13: ಪ್ರಸಕ್ತ ಸಾಲಿನಲ್ಲಿ (2024) ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪಥ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ರ‍್ಯಾಲಿ ನಡೆಯಲಿದೆ.
ಇದೇ ಆಗಸ್ಟ್ 22 ರಿಂದ ಆಗಸ್ಟ್ 31ರವರೆಗೆ ಶಿವಮೊಗ್ಗದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ. ಇದಕ್ಕೆ ಶಿವಮೊಗ್ಗ, ದಾವಣಗೆರೆ, ಗದಗ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ಧಾರವಾಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರ ಇರಲಿದೆ. ಈ ಸಂಬಂಧ ಆಹ್ವಾನಿಸಿ ಈಗಾಗಲೇ ಅಭ್ಯರ್ಥಿಗಳ ಇಮೇಲ್‌ಗೆ ಮಾಹಿತಿ ಕಳುಹಿಸಲಾಗಿದೆ ಎಂದು ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು (ಪ್ರಭಾರ) ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
ಪ್ರಸಕ್ತ 2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹುಬ್ಬಳ್ಳಿ ನಗರದಲ್ಲಿ ಹೊಸದಾಗಿ ಪ್ರಾರಂಭವಾಗುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ ಸುಸಜ್ಜಿತವಾದ ಕಟ್ಟಡಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಬಾಡಿಗೆ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳನ್ನು ಒಳನ್ನೊಳಗೊಂಡ 100 ವಿದ್ಯಾರ್ಥಿಗಳು ವಾಸಿಸಲು ಅನುಕೂಲವಾಗುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಡುಗೆ ಮನೆ, ವಸತಿ ಕೊಠಡಿ, ಸ್ನಾನ ಗೃಹ, ಶೌಚಾಲಯ, ವಿದ್ಯುತ್ ಹಾಗೂ ನೀರಿನ ಸೌಕರ್ಯ ಇರಲಿದೆ.
ಆಸಕ್ತರು ಕಟ್ಟಡದ ಹಾಗೂ ಮೂಲಭೂತ ಸೌಕರ್ಯಗಳ ಛಾಯಾಚಿತ್ರಗಳೊಂದಿಗೆ ವಿವರವಾದ ಮಾಹಿತಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, 2 ನೇ ಮಹಡಿ ರೂಮ್ ನಂ. 3, ಮಿನಿವಿಧಾನಸೌಧ ಹುಬ್ಬಳ್ಳಿ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2256776 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications