ಅಗ್ನಿಪಥ್ ಯೋಜನೆ; ವಾಯುಪಡೆಗೆ 7.5 ಲಕ್ಷ ಅರ್ಜಿ
ನವದೆಹಲಿ ಜು.6: ಅಗ್ನಿಪಥ್ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭಿಸಿದ ಜೂನ್ 24ರಿಂದ ಈವರೆಗೆ ಒಟ್ಟು 7.5 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ಬುಧವಾರ ತಿಳಿಸಿದೆ.
ಕಳೆದ ತಿಂಗಳು ಜೂನ್ 24ರಿಂದ ಆರಂಭವಾಗಿದ್ದ ಅಗ್ನಿವೀರ್ ನೋಂದಣಿ ಪ್ರಕ್ರಿಯೆ ಮಂಗಳವಾರ ಕೊನೆಗೊಂಡಿದೆ. ಅಗ್ನಿಪಥ್ ಯೋಜನೆಯನ್ನು ಜೂನ್ 14 ರಂದು ಘೋಷಿಸಿದ ನಂತರ ಸುಮಾರು ಒಂದು ವಾರ ದೇಶದ ವಿವಿಧ ರಾಜ್ಯಗಳಲ್ಲಿ ಹಿಂಸಾಚಾರ, ಪ್ರತಿಭಟನೆಗಳು ನಡೆದಿದ್ದವು.
ಈ ಯೋಜನೆಯಿಂದ ದೇಶದ ಯುವಕರ ಭವಿಷ್ಯಕ್ಕೆ ತೊಂದರೆ ಉಂಟಾಗಲಿದೆ ಎಂದು ಆರೋಪಿಸಲಾಗಿತ್ತು. ಪ್ರತಿ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಯೋಜನೆ ಹಿಂಪಡೆಯುವಂತೆ ಆಗ್ರಹಿಸಿದ್ದರು. ಕೇಂದ್ರ ಸರ್ಕಾರ ನಡೆ ಕುರಿತು ಟೀಕಿಸಿದ್ದರು.

ವಾಯುಪಡೆಗೆ 7,49,899 ಅರ್ಜಿ ಸಲ್ಲಿಕೆ; ಭಾರತೀಯ ವಾಯುಪಡೆ ಅಗ್ನಿಪಥ್ ನೇಮಕಾತಿ ಯೋಜನೆ ಯಡಿ ನಡೆಸಿದ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಮಂಗಳವಾರ ಪೂರ್ಣಗೊಂಡಿದೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದೆ. ಈ ಹಿಂದೆ 6,31,528 ಅರ್ಜಿಗಳು ಸಲ್ಲಿಕೆ ಆಗಿದ್ದವು. ಅವುಗಳೇ ಹೆಚ್ಚು ಎನ್ನಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಇತರ ಸೇನಾಪಡೆಗಳ ನೇಮಕಾತಿಗಳ ಸುತ್ತಿನಲ್ಲಿ ಅತ್ಯಧಿಕ 7,49,899 ಅರ್ಜಿಗಳು ವಾಯುಪಡೆಗೆ ಸಲ್ಲಿಕೆ ಗೆ ಆಗಿವೆ ಎಂದು ತಿಳಿದು ಬಂದಿದೆ.
ಅಗ್ನಿಪಥ್ ನೇಮಕಾತಿ ಯೋಜನೆಯಡಿ 17.5ವರ್ಷದಿಂದ 21 ವರ್ಷ ವಯಸ್ಸಿನವರೆಗಿನ ಯುವಕರು ಅರ್ಜಿ ಸಲ್ಲಿಕೆ/ ಆನ್ ಲೈನ್ ನೋಂದಣಿಗೆ ಅರ್ಹರಾಗಿರುತ್ತಾರೆ. ಇವರು ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಅವಧಿಗೆ ಕಾರ್ಯ ನಿರ್ವಹಿಸಲಿದ್ದಾರೆ. ಆಯ್ಕೆಯಾಗುವವರ ಪೈಕಿ ಸುಮಾರು ಶೇ.25 ಜನರನ್ನು ನಾಲ್ಕು ವರ್ಷದ ಸೇವೆ ಬಳಿಕ ಪೂರ್ಣಾವಧಿ ಸೇವೆಗೆ ಮುಂದುವರಿಸಲಾಗುವುದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.
The online registration process conducted by IAF towards the #AgnipathRecruitmentScheme has been completed. Compared to 6,31,528 applications in the past, which was the highest in any recruitment cycle, this time 7,49,899 applications have been received: Indian Air Force (IAF) pic.twitter.com/BVidF3lfaf
— ANI (@ANI) July 6, 2022
ಯೋಜನೆ ವಿರೋಧಿಗಳನ್ನು ಪರಿಗಣಿಸಲ್ಲ
ಜೊತೆಗೆ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ದೇಶದ ಯಾವುದೇ ಮೂಲಗಳಲ್ಲಿ ಹಿಂಸಾತ್ಮಕ ಕೃತ್ಯಕ್ಕೆ ಇಲ್ಲವೇ ಪ್ರತಿಭಟನೆಗೆ ಪ್ರಚೋದನೆ ನೀಡುವ ಯುವಕರನ್ನು ಪರಿಗಣಿಸಲಾಗುವುದಿಲ್ಲ. ಅಂತವರನ್ನು ಸಶಸ್ತ್ರ ಪಡೆಗಳಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ರಕ್ಷಣಾ ಇಲಾಖೆ, ಸೇನಾಪಡೆಗಳ ಮುಖ್ಯಸ್ಥರು ತಿಳಿಸಿದ್ದಾರೆ.

ಮೊದಲು 17.5ರಿಂದ 21ವರ್ಷ ವಯಸ್ಸಿನ ಮಿತಿ ಇಡಲಾಗಿತ್ತು. ನಂತರ ಜೂ.16ರಂದು ಅದನ್ನು ಗರಿಷ್ಠ 21 ರಿಂದ 23 ವರ್ಷಗಳಿಗೆ ಹೆಚ್ಚಿಸಲಾಯಿತು. ಬಳಿಕ ಕೇಂದ್ರ ಅರೆಸೇನಾ ಪಡೆ ಮತ್ತು ರಕ್ಷಣಾ ಪಡೆಗಳಲ್ಲಿ ಅಗ್ನಿವೀರರು ಆದ್ಯತೆ ಮೇರೆಗೆ ಕಾರ್ಯನಿರ್ವಹಣೆ ಕೈಗೊಳ್ಳಲಾಗುವ ಕ್ರಮ ಕುರಿತು ಘೋಷಿಸಲಾಗಿತು. ಅಲ್ಲದೇ ಕೆಲವು ಸಾರ್ವಜನಿಕ ಉದ್ಯಮಗಳು ನಿವೃತ್ತಿ ನಂತರ ಅಗ್ನಿವೀರರಿಗೆ ಇರುವ ಉದ್ಯೋಗವಕಾಶಗಳು ಬಗ್ಗೆ ಸ್ಪಷ್ಟಪಡಿಸಿದ್ದವು.
ಸಾಲದೆಂಬಂತೆ ಅಗ್ನಿಪಥ್ ಯೋಜನೆಯಡಿ ಸಶಸ್ತ್ರ ಪಡೆಗೆ ಸೇರಿ ಸೇವೆ ಸಲ್ಲಿಸಿದ ಅಗ್ನಿವೀರ ಸೈನಿಕರನ್ನು ರಾಜ್ಯದ ಪೊಲೀಸ್ ಪಡೆಗಳಲ್ಲಿ ನೇಮಕ ಮಾಡಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಆಡಳಿತದಲ್ಲಿರುವ ಹಲವು ರಾಜ್ಯಗಳು ಈಗಾಗಲೇ ಘೋಷಿಸಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications