Agniveer Recruitment: ಕರ್ನಾಟಕದಲ್ಲಿ ಏಪ್ರಿಲ್ 17-26 ರವರೆಗೆ ಅಗ್ನಿವೀರ್ ಪರೀಕ್ಷೆ
ಬೆಂಗಳೂರು ಏಪ್ರಿಲ್ 11: ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಆನ್‌ಲೈನ್ ಮೂಲಕ ಏಪ್ರಿಲ್ 17 ರಿಂದ 26 ರವರೆಗೆ ನಡೆಯಲಿದೆ. ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು. ನಂತರ ದೈಹಿಕ ಸಾಮರ್ಥ್ಯ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.
ಕರ್ನಾಟಕದ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಇ) ಏಪ್ರಿಲ್ 17 ರಿಂದ 26 ರವರೆಗೆ ನಡೆಸಲಾಗುವುದು, ಏಪ್ರಿಲ್ 22 ಮತ್ತು 23 ರ ರಜಾದಿನಗಳು ಎಂದು ರಕ್ಷಣಾ ಸಚಿವಾಲಯ (MoD) ತಿಳಿಸಿದೆ.

"ಪರೀಕ್ಷೆಯ ಪ್ರವೇಶ ಕಾರ್ಡ್‌ಗಳು ಅಭ್ಯರ್ಥಿಗಳು joinindianarmy.nic.in ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಬಹುದು. ಆನ್‌ಲೈನ್ ಪರೀಕ್ಷೆಯನ್ನು ವಿವಿಧ ಕೇಂದ್ರಗಳಲ್ಲಿ ಮೂರು ಪಾಳಿಗಳಲ್ಲಿ ನಡೆಸಲಾಗುವುದು. ಹೆಚ್ಚಿನ ವಿವರಗಳು ವೆಬ್‌ಸೈಟ್‌ನಲ್ಲಿವೆ" ಎಂದು MoD ಪ್ರಕಟಣೆಯಲ್ಲಿ ತಿಳಿಸಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುವ ಖರ್ಚು ವೆಚ್ಚಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಇದು ಜನಸಂದಣಿಯನ್ನು ಕಡಿಮೆ ಮಾಡುತ್ತದೆ ಮತ್ತು ಸುಲಭವಾಗಿ ನಿರ್ವಹಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ, ಅಗ್ನಿವೀರ್‌ಗಳ ನೇಮಕಾತಿ ಪ್ರಕ್ರಿಯೆಯು ವಿಭಿನ್ನ ಆದೇಶವನ್ನು ಅನುಸರಿಸಿದ್ದು, ಅಭ್ಯರ್ಥಿಗಳು ಮೊದಲು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಬೇಕಾಗಿತ್ತು, ನಂತರ ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು ಹಾಗೂ ಕೊನೆಯ ಹಂತವಾಗಿ ಸಿಇಇಗೆ ಅರ್ಹತೆ ಪಡೆಯಬೇಕಾಗಿತ್ತು.

ಭಾರತೀಯ ಮಿಲಿಟರಿಯು ಅಗ್ನಿವೀರ್ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಅಗ್ನಿವೀರ್ ಜೆನೆರಲ್ ಡ್ಯೂಟಿ ಕೆಟಗರಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಿರುವವರು ಪರೀಕ್ಷೆ ಪ್ರವೇಶ ಪತ್ರವನ್ನು ಏಪ್ರಿಲ್ 8 ರವರೆಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ, ಲಾಗಿನ್ ಆಗುವ ಮೂಲಕ ಡೌನ್‌ಲೋಡ್ ಮಾಡಬಹುದು.
ಅಗ್ನಿವೀರ್ (ಟೆಕ್ನಿಕಲ್) (ಎಲ್ಲಾ ಪಡೆಗಳು), ಅಗ್ನಿವೀರ್ (ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್) (ಎಲ್ಲಾ ಪಡೆಗಳು) ಮತ್ತು ಅಗ್ನಿವೀರ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ಏಪ್ರಿಲ್ 11 ರಿಂದ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ಇಂಡಿಯನ್ ಆರ್ಮಿಯು ಅಗ್ನಿವೀರ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಕಾಮನ್ ಎಂಟ್ರ್ಯಾನ್ಸ್ ಟೆಸ್ಟ್ ಅನ್ನು ಏಪ್ರಿಲ್ 17 ರಿಂದ 26 ರವರೆಗೆ ನಡೆಸಲಿದೆ.
ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರ, ಪರೀಕ್ಷೆ ಸಮಯದ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ಚೆಕ್ ಮಾಡಿಕೊಳ್ಳಬಹುದು. ಅಡ್ಮಿಟ್ ಕಾರ್ಡ್ ಜತೆಗೆ ಅಧಿಕೃತ ಗುರುತಿನ ಚೀಟಿಯನ್ನು ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.
ಈ ಮೇಲೆ ತಿಳಿಸಲಾದ ವೆಬ್‌ಸೈಟ್ ಗೆ ಭೇಟಿ ನೀಡಿ. ಅಗ್ನಿವೀರರ ಪರೀಕ್ಷೆ ಅಡ್ಮಿಟ್ ಕಾರ್ಡ್ ಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ತೆರೆಯುವ ಆರ್ಮಿ ವೆಬ್‌ಪೇಜ್‌ನಲ್ಲಿ ರಿಜಿಸ್ಟರ್ ನಂಬರ್ / ರೋಲ್ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್ ಆಗಿ. ನಂತರ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಗ್ನಿವೀರ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಿದ್ದು, ಜೆನೆರಲ್ ನಾಲೆಡ್ಜ್, ಗಣಿತ, ಭೌತಶಾಸ್ತ್ರ, ಕೆಮಿಸ್ಟ್ರಿ, ಲಾಜಿಕಲ್ ರೀಸನಿಂಗ್, ಜೆನೆರಲ್ ಇಂಗ್ಲಿಷ್ ವಿಷಯಗಳಲ್ಲಿ ಪ್ರಮುಖವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. 200 ಅಂಕಗಳಿಗೆ ಈ ಪರೀಕ್ಷೆ ಇದ್ದು, ಕನಿಷ್ಠ 80 ಅಂಕಗಳನ್ನು ಪಾಸ್ ಮಾಡಲು ಪಡೆಯಬೇಕಿರುತ್ತದೆ. ತಪ್ಪು ಉತ್ತರಗಳಿಗೆ ಶೇಕಡ. 25 ಅಂಕಗಳನ್ನು ಕಳೆಯಲಾಗುತ್ತದೆ.












Click it and Unblock the Notifications