ವಾಯು ಸೇನೆ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆ ವಿವರಗಳು

ದಾವಣಗೆರೆ, ಜನವರಿ 23; ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅವಿವಾಹಿತ ಯುವಕ, ಯುವತಿಯರು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಸಲ್ಲಿಕೆ ಮಾಡುವವರು ದ್ವಿತೀಯ ಪಿಯುಸಿ (ವಿಜ್ಞಾನ, ವಾಣಿಜ್ಯ ಮತ್ತು ಕಲೆ ವಿಷಯಗಳಲ್ಲಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50 ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಬೇಕು.

Agniveer Recruitment Air Force February 6 Last Date To Apply

2 ಜನವರಿ 2004 ರಿಂದ 2 ಜುಲೈ 2007ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು. ಆಸಕ್ತರು ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು 550 ರೂ. ಶುಲ್ಕದೊಂದಿಗೆ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದು. ಸೇವಾ ಅವಶ್ಯಕತೆಯ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಮಾಡಿದವರನ್ನು ಮಾರ್ಚ್‌ 17ರಿಂದ ಮೂರು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ನೇಮಕವಾದ ಅಭ್ಯರ್ಥಿಗಳಿಗೆ 30 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ವಯೋಮಿತಿಯಲ್ಲಿ ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು https://agnipathvayu.cdac.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08192-259446.

2022ರಲ್ಲಿ ಕೇಂದ್ರ ಸರ್ಕಾರ ಭಾರತೀಯ ಯುವಕರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಆಕರ್ಷಕ ನೇಮಕಾತಿ ಯೋಜನೆಯಾದ ಅಗ್ನಿಪತ್ ಘೋಷಣೆ ಮಾಡಿತು. ಈ ಯೋಜನೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಅಗ್ನಿವೀರ್‌ ಎಂದು ಕರೆಯಲಾಗುತ್ತದೆ. ಅಗ್ನಿಪಥ್ ದೇಶಭಕ್ತಿ ಮತ್ತು ಪ್ರೇರಿತ ಯುವಕರಿಗೆ ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ.

ಈ ಯೋಜನೆ ಅನುಷ್ಠಾನದಿಂದ ಭಾರತೀಯ ಸಶಸ್ತ್ರ ಪಡೆಗಳ ಸರಾಸರಿ ವಯಸ್ಸಿನ ಮಿತಿ ಸುಮಾರು 4-5 ವರ್ಷಗಳು ಕಡಿಮೆಯಾಗಲಿದೆ. ಸ್ವಯಂ ಶಿಸ್ತು, ಶ್ರದ್ಧೆ ಮತ್ತು ಆಳವಾದ ತಿಳುವಳಿಕೆಯೊಂದಿಗೆ ಯುವಕರು ಸೇನಾಪಡೆಗಳಲ್ಲಿ ಕೆಲಸ ಮಾಡಬಹುದು. ಇದು ಅವರಲ್ಲಿ ಕೌಶಲ್ಯವನ್ನು ಹೆಚ್ಚಿಸಲು ಸಹಾಯಕವಾಗಿದೆ. ದೇಶದ ಮೂರು ಸೇನಾಪಡೆಗಳ ಮಾನವ ಸಂಪನ್ಮೂಲ ನೀತಿಯಲ್ಲಿ ಈ ಯೋಜನೆ ಹೊಸ ಯುಗವನ್ನು ಆರಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+