ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿ; ಅಗ್ನಿವೀರರ ನೇಮಕಾತಿಗಾಗಿ ರ‍್ಯಾಲಿ

|
Google Oneindia Kannada News

ಹಾವೇರಿ, ಆಗಸ್ಟ್‌. 1: ಹಾವೇರಿ ನಗರದಲ್ಲಿ ಆಗಸ್ಟ್‌ 1ರಿಂದ ಕೇಂದ್ರ ಸರ್ಕಾರದ ನೂತನ ಯೋಜನೆ ಅಗ್ನಿಪಥ್‌ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ರ‍್ಯಾಲಿ ನಡೆಯಲಿದೆ.

ಸೆಪ್ಟೆಂಬರ್ 1 ರಿಂದ 20ರವರೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಗೆ ಅಗತ್ಯವಿರುವ ಉಪಕರಣಗಳು ಸೇರಿದಂತೆ ಮೂಲಸೌಕರ್ಯಗಳ ಸಿದ್ಧತೆಗೆ ಸಂಬಂಧಿತ ಅಧಿಕಾರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಈಗಾಗಲೇ ಸೂಚನೆ ನೀಡಿದ್ದಾರೆ.

ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ

ಈ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಗ್ನಿಪತ್ ನೇಮಕಾತಿ ರ‍್ಯಾಲಿ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಡಿಸಿ ಹೊಸಮನಿ ಸಿದ್ದಪ್ಪ ಸಭೆ ನಡೆಸಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರರ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ನಡೆಸಲು ಸ್ಥಳ ನಿಗದಿಪಡಿಸಲಾಗಿದೆ.

ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕ ಮಾಡಿಕೊಳ್ಳು ಸೇನೆಯಿಂದ ಸರ್ಕಾರದಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ 50 ಸಾವಿರದಷ್ಟು ಇದಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ನಿತ್ಯವು 2500 ರಿಂದ 3000 ಜನರು ಅಗ್ನಿವೀರರ ನೇಮಕಾತಿಗೆ ಅಭ್ಯರ್ಥಿಗಳು ಆಗಮಿಸುತ್ತಿದ್ದಾರೆ.

ಭಾರತೀಯ ಸೇನಾ ನೇಮಕಾತಿ ವಿಭಾಗದಿಂದ ಅಧಿಕಾರಿಗಳು ಈಗಾಗಲೇ ಆಗಮಿಸಲಿದ್ದಾರೆ. ಬರುವ ಎಲ್ಲರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ, ವಸತಿ, ಸ್ವಚ್ಛತೆ, ಸೇನಾ ನಿಯಮಗಳಿಗೆ ಅನುಗುಣವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧತೆ ಕಾರ್ಯವನ್ನು ಸಹ ಜಿಲ್ಲೆಯ ಅಧಿಕಾರಿಗಳು ಕೈಗೊಳ್ಳಬೇಕು. ಸೇನಾ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳ ನಿಯಮ ಹಾಗೂ ಮಾರ್ಗದರ್ಶನದಂತೆ ವ್ಯವಸ್ಥೆ ಮಾಡಬೇಕು ಎಂದು ಡಿಸಿ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ

11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ

ಆಗಸ್ಟ್‌ 1ರಿಂದ 20 ದಿನಗಳ ಕಾಲ ನಡೆಯುವ ನೇಮಕಾತಿ ರ‍್ಯಾಲಿಯಲ್ಲಿ ರಾಜ್ಯದ ಸುಮಾರು 11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ನೇಮಕಾತಿಗಾಗಿ ಬರುವ ವಿವಿಧ ಜಿಲ್ಲೆಯ ಅಭ್ಯರ್ಥಿಗಳಿಗೆ ಸಾರಿಗೆಗೆ ಯಾವುದೇ ತೊಂದರೆಯಾಗದಂತೆ ವಿಶೇಷವಾಗಿ ಹುಬ್ಬಳ್ಳಿ ಮತ್ತು ದಾವಣಗೆರೆಯಿಂದ ಹಾವೇರಿಗೆ ಹೆಚ್ಚುವರಿ ಸಾರಿಗೆ ಸಂಪರ್ಕ ಕಲ್ಪಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ರತಿದಿನ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ

ಪ್ರತಿದಿನ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ

ಸಭೆಯಲ್ಲಿ ಅಗ್ನಿಪಥ್ ನೇಮಕಾತಿ ವಿಭಾಗದ ಅಧಿಕಾರಿ ಸುನೀಲಕುಮಾರ್‌ ಮಾತನಾಡಿ, ಆಗಸ್ಟ್‌ 1ರಿಂದ ಆರಂಭವಾಗುವ ರ‍್ಯಾಲಿಯಲ್ಲಿ 50 ರಿಂದ 60ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿದಿನ 2500 ರಿಂದ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅಲ್ಲದೆ ದಾಖಲೆಗಳ ಪರಿಶೀಲನೆಯೂ ನಡೆಯುತ್ತದೆ. ಕ್ರೀಡಾಂಗಣದ ಒಳಭಾಗದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು. ಹೊರ ಆವರಣದಲ್ಲಿ ಅಭ್ಯರ್ಥಿಗಳಿಗೆ ಶಾಮಿಯಾನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ರ‍್ಯಾಲಿ

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ರ‍್ಯಾಲಿ

ಬೆಂಗಳೂರು ಭೂಸೇನಾ ಭರ್ತಿ ಕಾರ್ಯಾಲಯ ಇವರ ವತಿಯಿಂದ 'ಅಗ್ನಿವೀರ್' ಸೇನಾ ನೇಮಕಾತಿ ರ‍್ಯಾಲಿಯು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ.

www.joinindianarmy.nic.in ಗೆ ಭೇಟಿ ನೀಡಿ

www.joinindianarmy.nic.in ಗೆ ಭೇಟಿ ನೀಡಿ

17 1/2 ರಿಂದ 23 ವರ್ಷ ಪ್ರಾಯದ ಅರ್ಹ ಪುರುಷ ಅಭ್ಯರ್ಥಿಗಳು ಜಾಲತಾಣದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ರ‍್ಯಾಲಿಯ ಮುಂಚಿತವಾಗಿ ಇಮೇಲ್ ಮುಖಾಂತರ ಅಡ್ಮಿಟ್ ಕಾರ್ಡು ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಾಲತಾಣ www.joinindianarmy.nic.in ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Recommended Video

T20 ಸರಣಿಯಿಂದ KL ರಾಹುಲ್ ಗೆ ಗೇಟ್ ಪಾಸ್!! ಸಂಜು ಸ್ಯಾಮ್ಸನ್ ಗೆ ಹೊಡೀತು ಲಕ್.. | *Cricket | OneIndia Kannada

English summary
Agniveer recruitment rally will be held in Haveri from August 1 for the recruitment of fire fighters under the central government's new scheme Agnipath scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X