ಕೃಷಿ ಇಲಾಖೆ 'ಸಿ' ವೃಂದದ ನೇಮಕಾತಿ: ಸ್ಪಷ್ಟನೆಗಳು

ಬೆಂಗಳೂರು, ಡಿಸೆಂಬರ್ 31: ಕರ್ನಾಟಕ ಸರ್ಕಾರ ಸದ್ಯಕ್ಕೆ ಯಾವುದೇ ಇಲಾಖೆಗಳ ಹೊಸ ನೇಮಕಾತಿಯನ್ನು ನಡೆಸುತ್ತಿಲ್ಲ. ಆದರೆ ಕೃಷಿ ಇಲಾಖೆ ನೇಮಕಾತಿ ಹೆಸರಿನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕೃಷಿ ಇಲಾಖೆ 'ಸಿ' ವೃಂದದ ನೇಮಕಾತಿಗಳು ಇದಾಗಿದೆ ಎಂಬ ಮಾಹಿತಿ ಇದೆ. ಈ ಕುರಿತು ಸ್ಪಷ್ಟನೆಗಳನ್ನು ನೀಡಲಾಗಿದೆ.

ಕೃಷಿ ಇಲಾಖೆ ತನ್ನ ಸ್ಪಷ್ಟನೆಯಲ್ಲಿ ಗ್ರೂಪ್ 'ಸಿ' ಮೇಲ್ವಿಚಾರಕರ ಹುದ್ದೆಯ ನೇಮಕಾತಿಗಾಗಿ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಕಿಡಿಗೇಡಿಗಳು ನಕಲಿ ಅಧಿಸೂಚನೆಯನ್ನು ರಚನೆ ಮಾಡಿ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ತಿಳಿಸಿದೆ.

Agriculture Department Recruitment 2024 Clarification

ಕೃಷಿ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡುವಾಗ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಮೊದಲು ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ. ಬಳಿಕ ಆಯೋಗ ನೇಮಕಾತಿ ಅಧಿಸೂಚನೆಯನ್ನು ಹೊರಡಿಸುತ್ತದೆ. ಅಧಿಸೂಚನೆ ಪ್ರಕಟವಾದ ಬಳಿಕ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ನಿಯಮಾನುಸಾರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.

ಸರ್ಕಾರದ ಅಧೀನ ಕಾರ್ಯದರ್ಶಿ, ಕರ್ನಾಟಕ ಸರ್ಕಾರದ ಸಚಿವಾಲಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜಕೀಯ) ನೀಡಿದ ಮಾಹಿತಿ ಅನ್ವಯ ಕೃಷಿ ಇಲಾಖೆಯಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳು 6,773. ಇವುಗಳಲ್ಲಿ ಗ್ರೂಪ್ 'ಎ' 286, ಗ್ರೂಪ್ 'ಬಿ' 3033, ಗ್ರೂಪ್ 'ಸಿ' 2280 ಮತ್ತು ಗ್ರೂಪ್ 'ಡಿ' 1174.

ಹೊಸ ನೇಮಕಾತಿಗಳಿಗೆ ತಡೆ: ಕರ್ನಾಟಕ ಸರ್ಕಾರ ಸದ್ಯಕ್ಕೆ ಯಾವುದೇ ಹೊಸ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸದಂತೆ ಆದೇಶಿಸಿದೆ. ಅಕ್ಟೋಬರ್ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿ ಕುರಿತು ವರದಿ ನೀಡಲು ಏಕಸದಸ್ಯ ಆಯೋಗವನ್ನು ರಚಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು.

ಈ ಆಯೋಗದ ವರದಿ ಬರುವ ತನಕ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿ ಕುರಿತು ವರದಿ ನೀಡಲು ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದೆ. ವರದಿ ಸಲ್ಲಿಕೆ ಮಾಡಲು ಎರಡು ತಿಂಗಳ ಕಾಲಾವಕಾಶವ ನೀಡಲಾಗಿದೆ.

ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ ವರದಿ ಸಲ್ಲಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾದ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಲಾಗಿದೆ.

ದಿನಾಂಕ 28.10.2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.

ಆದರೆ ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ವಯವೇ ಪೂರ್ಣಗೊಳಿಸಬಹುದಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+