ಕೃಷಿ ಇಲಾಖೆ ನೇಮಕಾತಿ; ಮಾರ್ಚ್ 20ರೊಳಗೆ ಅರ್ಜಿ ಹಾಕಿ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು, ಮಾರ್ಚ್ 13; ಕೃಷಿ ಇಲಾಖೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಎರಡು ವರ್ಷಗಳ ಅವಧಿಗೆ ಆರ್‌ಕೆವಿವೈ ಕೋಶದಲ್ಲಿ ಕಾರ್ಯ ನಿರ್ವಹಣೆ ಮಾಡಲು ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹರು 20/3/2023ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಏಪ್ರಿಲ್ 2023 ರಿಂದ ಮಾರ್ಚ್ 2025ರ ಅಂತ್ಯದ ತನಕ ಎರಡು ವರ್ಷಗಳ ಅವಧಿಗೆ ಆರ್‌ಕೆವಿವೈ ಕೋಶದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಅನುಭವವಿರುವ ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

Agriculture Department Recruitment Apply For Technical Consultant Post

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ಐಸಿಎಆರ್‌ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕ್ಷೇತ್ರ ಮಟ್ಟದಲ್ಲಿ ಕನಿಷ್ಠ 5 ವರ್ಷಗಳ ಕಾಲದ ಅನುಭವ ಹೊಂದಿರಬೇಕು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸೇವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.

ಒಟ್ಟು ಮೂರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಕರ್ನಾಟಕ ಕೃಷಿ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಲಾಗಿದೆ, ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಸಹ ಇರಲಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸೂಕ್ತ ದಾಖಲಾತಿಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ Director of Agriculture, Commissionerate of Agriculture, Seshadri Road, Bengaluru-01.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು https://raitamitra.karnataka.gov.in ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಸೂಕ್ತ ದಾಖಲಾತಿಗಳ ಜೊತೆ ಭರ್ತಿ ಮಾಡಿ ಸಲ್ಲಿಕೆ ಮಾಡುವುದು. ಹೆಚ್ಚಿನ ಮಾಹಿತಿಗಾಗಿ 080-22074161 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

jobs

ಜೆಸಿಬಿ ಚಾಲನಾ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಹಳಿಯಾಳ ಮತ್ತು ಜೆಎಸ್‍ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ 30 ದಿನಗಳ ಉಚಿತ ಜೆಸಿಬಿ ಅಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.

ಅಭ್ಯರ್ಥಿಗಳು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಮತ್ತು ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಏಪ್ರಿಲ್ 25 ರೊಳಗಾಗಿ ದಾಂಡೇಲಿಯ ಹಸನಮಾಳದ ಕೆನೆರಾಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ವಿಸ್ತರಣಾ ಕೇಂದ್ರಕ್ಕೆ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 08284-298547, 9632149217, 9449782425 ಸಂಖ್ಯೆಗೆ ಕರೆ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+