ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶು ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ: ಪ್ರಭು ಚೌಹಾಣ್

|
Google Oneindia Kannada News

ಬೆಂಗಳೂರು, ಜೂ. 18: ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಅಭ್ಯರ್ಥಿಗಳಿಗೆ ಪಶುವೈದ್ಯಕೀಯ ಸಹಾಯಕ ಮತ್ತು ಪಶುವೈದ್ಯಕೀಯ ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ತೊಂದರೆ ಆಗಿರುವ ಕುರಿತು ಕಲ್ಯಾಣ ಕರ್ನಾಟಕ ಭಾಗದ ಅನೇಕ ಉದ್ಯೋಗ ಆಕಾಂಕ್ಷಿಗಳು ಕರೆ ಮಾಡಿ ತಮ್ಮ ಅಸಾಹಾಯಕತೆಯನ್ನು ತೋಡಿಕೊಂಡಿದ್ದರು. ಈ ಕುರಿತಾಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಸಚಿವ ಚೌಹಾಣ್ ತಿಳಿಸಿದ್ದಾರೆ.

AHVS Karnataka Recruitment 2021: 3 Months Time to Apply Online for Veterinary Assistants & Veterinary Inspectors Posts

ಪಶುವೈದ್ಯಕೀಯ ಸಹಾಯಕ 83 ಹುದ್ದೆಗಳು ಮತ್ತು ಪಶುವೈದ್ಯಕೀಯ ಪರೀಕ್ಷಕ 32 ಹುದ್ದೆಗಳಿಗೆ ದಿನಾಂಕ 16.06.2021 ರಿಂದ ದಿನಾಂಕ 18.08.2021ರ ವರೆಗೆ ಕಾಲಾವಕಾಶ ನೀಡಲಾಗಿದೆ ಒಟ್ಟು 115 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

AHVS Karnataka Recruitment 2021: 3 Months Time to Apply Online for Veterinary Assistants & Veterinary Inspectors Posts

ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸುಮಾರು ಹುದ್ದೆಗಳು ಖಾಲಿಯಿದ್ದು ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತಂದು ಕ್ರಮೇಣ ಪಶುಸಂಗೋಪನೆ ಇಲಾಖೆಯಲ್ಲಿ ನೆಮಕಾತಿಗೆ ಕ್ರಮ ವಹಿಸಲಾಗುತ್ತಿದೆ. ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದ ಪಶು ವೈದ್ಯಕೀಯ ಸೇವೆಯನ್ನು ಹೆಚ್ಚು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

English summary
AHVS Karnataka Recruitment 2021 : 3 Months Time to Apply Online for Veterinary Assistants & Veterinary Inspectors Posts due to covid-19; Animal Husbandry Minister Prabhu Chauhan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X