ಸಹಾಯಕ ಪ್ರಾಧ್ಯಾಪಕರ ನೇಮಕಾತಿ; 2 ವರ್ಷ ವಯೋಮಿತಿ ಹೆಚ್ಚಳ
ಬೆಂಗಳೂರು, ಮೇ 24; ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಅನುದಾನಿತ ಪದವಿ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.
ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರ ಅಭಿಪ್ರಾಯದನ್ವಯ, ಸರ್ಕಾರಿ ಆದೇಶ ದಿನಾಂಕ 20/06/2018 ಮತ್ತು ಸರ್ಕಾರದ ಸೇರ್ಪಡೆ ಆದೇಶ 13/12/2018 ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಇವರ ಟಿಪ್ಪಣಿ 12/04/2023ರ ಅನ್ವಯ ಈ ಆದೇಶ ಪ್ರಕಟವಾಗಿದೆ.

ಆದೇಶದಲ್ಲಿ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸರ್ಕಾರದ ಆದೇಶ ದಿನಾಂಕ 20/06/2018 ಮತ್ತು ಸರ್ಕಾರದ ಆದೇಶ 13/12/2018ರಂತೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯೊಂದಿಗೆ ಖಾಸಗಿ ಅನುದಾನಿತ ಪಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎರಡು ವರ್ಷಗಳವರೆಗೆ ತಡೆಹಿಡಿಯಲಾಗಿತ್ತು ಎಂದು ತಿಳಿಸಲಾಗಿದೆ.
ಒಂದು ಬಾರಿಗೆ ಮಾತ್ರ ದಿನಾಂಕ 23/06/2022ರಿಂದ ಒಂದು ವರ್ಷದ ಅವಧಿಗೆ ಮಾತ್ರ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯ ಮಾನದಂಡವು ಮೊದಲ ನೇರ ನೇಮಕಾತಿಗೆ ಮಾತ್ರ ಅನ್ವಯವಾಗುವಂತೆ ಗರಿಷ್ಮ ವಯೋಮಿತಿಯನ್ನು ಎರಡು ವರ್ಷಗಳಿಗೆ ಮಾತ್ರ ಹೆಚ್ಚಿಸಿ ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಪ್ರಸ್ತಾವನೆ ಏನಿತ್ತು?; ವಿವಿಧ ಶಾಸಕರುಗಳು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಯವರಿಂದ ಸ್ವೀಕೃತವಾದ ಮನವಿ/ ಟಿಪ್ಪಣಿಗಳಲ್ಲಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಹತೆ ಹೊಂದಿ ಅನೇಕ ಪದವೀಧರರು ಒಂದೇ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗ ಕೋವಿಡ್ 19 ನಿಮಿತ್ತ ಅವರ ವಯಸ್ಸು ಮೀರುತ್ತಿರುವುದರಿಂದ ಅಂತವರಿಗೆ ಅನ್ಯಾಯವಾಗುತ್ತಿರುವುದು ಕಂಡುಬಂದಿದೆ ಎಂದು ತಿಳಿಸಲಾಗಿತ್ತು.

ಈಗಾಗಲೇ ಸರ್ಕಾರವು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಬೋಧಕ ಮತ್ತು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನೇಮಕಾತಿಯಲ್ಲಿ ನಿಗದಿಪಡಿಸಿರುವ ವಯೋಮಿತಿಯನ್ನು ದಿನಾಂಕ 31/12/2015ರ ಒಳಗಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೂ ಒಂದು ಬಾರಿ ವಿಸ್ತರಿಸಿ ಎಲ್ಲಾ ಅಭ್ಯರ್ಥಿಗಳಿಗೆ ತಲಾ 2 ವರ್ಷ ಸಡಿಲಿಕೆ ನೀಡಿ ಆದೇಶ ನೀಡುವಂತೆ ಕೋರಲಾಗಿತ್ತು.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಅಭಿಪ್ರಾಯವನ್ನು ಸಲ್ಲಿಸುವಂತೆ ಆಯುಕ್ತರನ್ನು ಕೋರಲಾಗಿತ್ತು. ಆಯುಕ್ತಾಲಯದ ಅಭಿಪ್ರಾಯದಲ್ಲಿ ಸರ್ಕಾರದ ಆದೇಶ 20/06/2018 ಸರ್ಕಾರದ ಆದೇಶ ಸಂಖ್ಯೆ ದಿನಾಂಕ 13/12/2018ರಂತೆ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಬೋಧಕರ ನೇಮಕಾತಿಗೆ ಅಭ್ಯರ್ಥಿಗಳ ಗರಿಷ್ಮ ವಯೋಮಿತಿಯನ್ನು ಪರಿಗಣಿಸಲಾಗಿದೆ ಎಂದು ಹೇಳಲಾಗಿತ್ತು.
ಆದಾಗ್ಯೂ, ಈ ಬಗ್ಗೆ ಸರ್ಕಾರದ ಹಂತದಲ್ಲಿ ಕ್ರಮ ಕೈಗೊಳ್ಳಬಹುದಾಗಿರುತ್ತದೆ ಎಂಬ ಅಭಿಪ್ರಾಯದೊಂದಿಗೆ ಪಸ್ತಾವನೆ ಸಲ್ಲಿಸಿದ್ದರು. ದಿನಾಂಕ 20/05/2018 ರನ್ವಯ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ದಿನಾಂಕ 31/12/2015 ರೊಳಗೆ ಖಾಲಿ ಆಗಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗಾಗಿ ಅಭ್ಯರ್ಥಿಗಳ ಗರಿಷ್ಠ, ವಯೋಮಿತಿಯನ್ನು ಸಾಮಾನ್ಯ ಅಭ್ಯರ್ಥಿಗಳಿಗೆ 40 ವರ್ಷಗಳು, ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-2 (ಎ), 2 (ಬಿ), 3 (ಎ) ಮತ್ತು 3 (ಬಿ)ಗಳಿಗೆ 43 ವರ್ಷಗಳು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅರ್ಜಿಗಳಿಗೆ 45 ವರ್ಷಗಳೆಂದು ನಿಗದಿಪಡಿಸಲಾಗಿರುತ್ತದೆ.
ಸರ್ಕಾರದ ಸೇರ್ಪಡೆ ಆದೇಶ ದಿನಾಂಕ 13/12/2018 ರನ್ವಯ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಬೋಧನಾನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೇಲಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸುವುದರೊಂದಿಗೆ ಅವರು ಬೋಧನಾನುಭವ ಹೊಂದಿರುವ ಸೇವಾವಧಿ ಅಥವಾ 5 ವರ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅವು ಅವಧಿಗೆ ಗರಿಷ್ಠ ವಯೋಮಿತಿಯಲ್ಲಿ ವಿನಾಯಿತಿ ನೀಡಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ ಎಂದು ತಿಳಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1)ಯು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ನೇರ ನೇಮಕಾತಿಗೆ 23/06/2022 ರಿಂದ ಒಂದು ವರ್ಷದ ಅವಧಿಗೆ ಮಾತ್ರ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯ ಮಾನದಂಡವು ಮೊದಲ ನೇರ ನೇಮಕಾತಿಗೆ ಮಾತ್ರ ಅನ್ವಯವಾಗುವ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು)ಯು ಸಹಮತಿಸುತ್ತದೆ ಎಂದು ತಿಳಿಸಲಾಗಿದೆ.
ಮೇಲ್ಮಂಡ ಅಂಶಗಳ ಹಿನ್ನೆಲೆಯಲ್ಲಿ ಪರಿಶೀಲಿಸಿ, ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎರಡು ವರ್ಷಗಳವರೆಗೆ ತಡೆಹಿಡಿದಿದ್ದರಿಂದ ಎರಡು ವರ್ಷಗಳಿಗೆ ಮಾತ್ರ ಹೆಚ್ಚಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಹೇಳಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications