ಸಂದರ್ಶನದ ಮೂಲಕ ಪ್ರಥಮ ದರ್ಜೆ ಕಾಲೇಜು ಬೋಧಕರ ಹುದ್ದೆ ಭರ್ತಿ
ಬೆಂಗಳೂರು, ಏಪ್ರಿಲ್ 03; ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಸಂದರ್ಶನಕ್ಕೆ 110 ಅಂಕಗಳನ್ನು ನಿಗದಿ ಮಾಡಲಾಗಿದೆ.
ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಿನಾಂಕ 31/12/2015ರೊಳಗೆ ವಿವಿಧ ಕಾರಣಗಳಿಂದ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಭರ್ತಿ ಮಾಡುವ ಸಂಬಂಧ ಆಡಳಿತ ಮಂಡಳಿಗಳಿಗೆ ಕೆಲವೊಂದು ಷರತ್ತು/ ಮಾನದಂಡಗಳನ್ನು ನಿಗದಿಪಡಿಸುವ ಕುರಿತು ಸರ್ಕಾರದ ಆದೇಶ ಕೋರಲಾಗಿತ್ತು.

ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ಕಾರಣಗಳಿಂದ ದಿನಾಂಕ 31/12/2015ರೊಳಗೆ ಖಾಲಿಯಾಗಿರುವ ಬೋಧಕರ ಹುದ್ದೆಗಳನ್ನು ಉಪಲಬ್ದ ಕಾರ್ಯಭಾರದ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ.
ಸರ್ಕಾರದ ಪತ್ರದಲ್ಲಿ ಆರ್ಥಿಕ ಇಲಾಖೆಯು ನಿಗದಿಪಡಿಸಿರುವ ಚೆಕ್‌ಲಿಸ್ಟ್‌ನಂತೆ ವಿದ್ಯಾರ್ಹತೆ ಮೀಸಲಾತಿ, ಕಾರ್ಯಭಾರದ ಆಧಾರದ ಮೇಲೆ ನಿಯಮಾನುಸಾರ ಪರಿಶೀಲಿಸಿ ಖಾಲಿಯಿರುವ ಹುದ್ದೆಗಳನ್ನು ಖಾಸಗಿ ಅನುದಾನಿತ (ಪದವಿ ಕಾಲೇಜು) ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಇಲಾಖೆಯು ನಿಗದಿಪಡಿಸಿರುವ ಮಾನದಂಡಗಳನ್ವಯ ಪಾರದರ್ಶಕವಾಗಿ ಖಾಲಿ ಹುದ್ದೆ ಭರ್ತಿ ಮಾಡಲು ನಿಯಮಾನುಸಾರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸುವ ಬಗ್ಗೆ ಅನುಮತಿ ನೀಡಲು ಆಯುಕ್ತರು, ಕಾಲೇಜು & ತಾಂತ್ರಿಕ ಶಿಕ್ಷಣ ಇಲಾಖೆ ಅವರಿಗೆ ಅಧಿಕಾರವನ್ನು ನೀಡಲಾಗಿದೆ.

ಅದರಂತೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಯುಕ್ತಾಲಯದಿಂದ ಅನುಮತಿ ಪಡೆದ ನಂತರ ಆಡಳಿತ ಮಂಡಳಿಗಳ ಹಂತದಲ್ಲಿ ಖಾಲಿ ಹುದ್ದೆಗಳನ್ನು ಪಾರದರ್ಶಕವಾಗಿ ಮತ್ತು ಏಕರೂಪವಾಗಿ ನಡೆಸಲು ಕೆಲವೊಂದು ಮಾರ್ಗಸೂಚಿ / ಷರತ್ತುಗಳನ್ನು ವಿಧಿಸಲು ಸರ್ಕಾರವು ತೀರ್ಮಾನಿಸಿದ್ದು ಈ ಹಿನ್ನಲೆಯಲ್ಲಿ ಕೆಳಕಂಡಂತೆ ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಿನಾಂಕ 31/12/2015ರೊಳಗೆ ವಿವಿಧ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಿದ್ದು, ಅದರಂತೆ ಆಡಳಿತ ಮಂಡಳಿಗಳು ಅಧಿಸೂಚನೆ ಹೊರಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಭರ್ತಿ ಮಾಡಿಕೊಳ್ಳಲು ಷರತ್ತು/ ಮಾನದಂಡಗಳನ್ನು ನಿಗದಿಪಡಿಸಿ ಆದೇಶಿಸಿದೆ.
* ಖಾಲಿ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ಯುಜಿಸಿ ಅಧಿಸೂಚನೆ 18/7/2018ರಲ್ಲಿ ನಿಗದಿದಪಡಿಸಲಾಗಿರುವಂತೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಂಕಗಳನ್ನು ನಿಗದಿಪಡಿಸಿ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುವುದು.
* ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನದ ಕರೆಯನ್ನು ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮುಖಾಂತರ ರವಾನಿಸುವುದು. ಸಂದರ್ಶನಕ್ಕೆ 110 ಅಂಕಗಳನ್ನು ನಿಗದಿಪಡಿಸುವುದು ಎಂದು ಸುತ್ತೋಲೆ ಹೇಳಿದೆ.
ಧಾರವಾಡ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನಲ್ಲಿ 6 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಕೆ ಮಾಡುವ ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಝಾದ್ ಭವನ, ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಹತ್ತಿರ, ಧಾರವಾಡ ಇವರ ಕಾರ್ಯಾಲಯವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0836-2971590, 7337768683.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications