ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking : ಗುಡ್ ನ್ಯೂಸ್, ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಗೆ ಆದೇಶ

|
Google Oneindia Kannada News

ಬೆಂಗಳೂರು, ಜೂನ್ 30: ಅನುದಾನಿತ ಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುವಂತೆ ಸರ್ಕಾರ ಆದೇಶವನ್ನು ಮಾಡುವ ಮೂಲಕ ಶಿಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ನೀಡಿದೆ.

ಡಿಸಂಬರ್ 31,2015ರ ವೆರಗೂ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮತಿಯನ್ನು ನೀಡಿದೆ.

ಸರ್ಕಾರಿ ಕೆಲಸವನ್ನು ಪಡೆಯುವ ಆಸೆಯನ್ನು ಹೊಂದಿರುವ ಶಿಕ್ಷಕರು ಸಿಇಟಿ ಬರೆದು ಉತ್ತಮ ಅಂಕ ಪಡೆದು ಬೋಧಕ ಹುದ್ದೆಗೆ ನೇಮಕವಾಗಬೇಕು. ಆದರೆ ಅನುದಾನಿತ (Aided School)ನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಹತೆಯನ್ನು ಹೊಂದಿದ್ದರೆ ಮೀಸಲಾತಿ ಅನ್ವಯ ನೇಮಕವನ್ನು ಮಾಡಿಕೊಳ್ಳಬಹುದಾಗಿದೆ.

Aided School Teachers Recruitment Order By Education department

ಆದೇಶದಲ್ಲಿ ಏನಿದೆ?; ಕೋವಿಡ್ 19ರಿಂದ ಸಂಭವಿಸಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ದೃಷ್ಠಿಯಿಂದ 2020-21ನೇ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಸದಾಗಿ ಅನುದಾನಕ್ಕೆ ಒಳಪಡಿಸದಂತೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚನೆಯನ್ನು ನೀಡಲಾಗಿತ್ತು.

ಜೂನ್ 23, 2022ರ ಅನಧಿಕೃತ ಟಿಪ್ಪಣಿಯಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 31.12.2015 ರ ವೆರಗೂ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡವ ಪ್ರಕ್ರಿಯೆಯನ್ನು ಮುಂದುವರೆಸಲು ಆರ್ಥಿಕ ಇಲಾಖೆ ಸಹಮತಿಸಿರುತ್ತದೆ.

Aided School Teachers Recruitment Order By Education department

ಈ ಹಿನ್ನೆಲೆಯಲ್ಲಿ ಅನುದಾನಿತ ಶಾಲೆಗಳಲ್ಲಿ ದಿನಾಂಕ 31.12.2015ರ ವೆರಗೂ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡವ ಪ್ರಕಿಯೆಯನ್ನು ಮುಂದುವರೆಸಲು ನಿಯಮನುಸಾರ ಕ್ರಮ ಕೈಗೊಳ್ಳುವಂತೆ ತಮಗೆ ತಿಳಿಸಲು ತಾನು ನಿರ್ದೇಶಿತನಾಗಿರುತ್ತೇನೆ ಎಂದು ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ. ಶ್ರೀನಿವಾಸ ಮೂರ್ತಿ ಆದೇಶಿಸಿದ್ದಾರೆ.

English summary
Aided School Teachers Recruitment Order By Education department, The government has given permission to fill the vacant teaching posts due to retirement, death, resignation and other reasons till December 31, 2015,Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X