170 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎಐಇಎಸ್‌ಎಲ್

ಬೆಂಗಳೂರು, ಅಕ್ಟೋಬರ್ 23 : ಎಐಇಎಸ್‌ಎಲ್ 170 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 5/11/2019 ಕೊನೆಯ ದಿನವಾಗಿದೆ.

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌) ಅಸಿಸ್ಟೆಂಟ್ ಸೂಪರ್ ವೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಇಂಜಿನಿಯರಿಂಗ್ ಡಿಪ್ಲೊಮಾ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸ್ಕಿಲ್ ಟೆಸ್ಟ್ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

AIESL Recruitment 2019 : 170 Assistant Supervisor Post

ಅರ್ಜಿ ಸಲ್ಲಿಸುವ ಸಾಮಾನ್ಯ/ಯುಆರ್ ಅಭ್ಯರ್ಥಿಗಳಿಗೆ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿಯವರಿಗೆ 36, ಎಸ್‌ಸಿ/ಎಸ್‌ಟಿಯವರಿಗೆ 38 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ಸಾಮಾನ್ಯ/ಇಡಬ್ಲ್ಯುಎಸ್/ಓಬಿಸಿಯವರಿಗೆ 1000 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಆಸಕ್ತ ಅಭ್ಯರ್ಥಿಗಳು 19/10/2019ರಿಂದ 5/11/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+