ದೆಹಲಿ ಏಮ್ಸ್ ನೇಮಕಾತಿ 2020: 430 ವಿವಿಧ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 17: ಅಖಿಲ ಭಾರತ ಮೆಡಿಕಲ್ ಸೈನ್ಸ್ ಇನ್ಸ್ಟಿಟ್ಯೂಟ್ (ಏಮ್ಸ್)ನಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. 430 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿರುವಂತೆ ವಿಜ್ಞಾನಿ ಹುದ್ದೆಗೆ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಮಾರ್ಚ್ 12ರೊಳಗೆ ಸಲ್ಲಿಸಬಹುದು.
ಸಂಸ್ಥೆ: All India Institute of Medical Sciences, ದೆಹಲಿ
ಹುದ್ದೆ ಹೆಸರು: ಸೈಂಟಿಸ್ಟ್, ಬಯೋಕೆಮಿಸ್ಟ್
ಒಟ್ಟು ಹುದ್ದೆ: 430
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 12, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ.

ವಯೋಮಿತಿ:
ಕನಿಷ್ಠ ವಯಸ್ಸು: 25 ವರ್ಷ.
ಗರಿಷ್ಠ ವಯಸ್ಸು: 45 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 1500 ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: 1200 ರು
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ನಲ್ಲಿ ಸಿಬಿಟಿ ಪರೀಕ್ಷೆ/ ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ, ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12.02.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.03.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications