ಮೈಸೂರಿನಲ್ಲಿ ಕೆಲಸ ಖಾಲಿ ಇದೆ, 42 ಹುದ್ದೆಗಳು
ಬೆಂಗಳೂರು, ಆಗಸ್ಟ್ 03 : ಎಐಐಎಸ್‌ಎಚ್ 42 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 17, 2018 ಕೊನೆಯ ದಿನವಾಗಿದೆ.
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ (ಎಐಐಎಸ್‌ಎಚ್) 17 ಪ್ರೊಫೆಸರ್, 15 ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ.
ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎ/ಎಂ.ಎಸ್ಸಿಯನ್ನು ಸೈಕಾಲಜಿ ವಿಷಯದಲ್ಲಿ ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಸಂಬಂಧಿಸಿದ ವಿಷಯದಲ್ಲಿ ಪಿಎಚ್‌ಡಿ ಪಡೆದವರು, ಇ ಎಂಬಿಬಿಎಸ್/ಎಂಎಸ್/ಇಎನ್‌ಟಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿಯನ್ನು ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಪ್ರೊಫೆಸರ್ ಹುದ್ದೆಗೆ 50 ವರ್ಷಗಳು, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 30 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. 17 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕದ ವಿವರ : ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 400 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಕೌಶಲ್ಯ ಪರೀಕ್ಷೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications