46 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್
ಬೆಂಗಳೂರು, ಏಪ್ರಿಲ್ 18 : ಏರ್ ಇಂಡಿಯಾ ಎಕ್ಸ್‌ಪ್ರೆಸ್ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 15 ದಿನಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
5 ಸ್ಟೋರ್ ಕೀಪರ್, 4 ಸೀನಿಯರ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 46 ಹುದ್ದೆಗಳನ್ನು ಭರ್ತಿ ಮಾಡಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸ್ಟೋರ್ ಕೀಪರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಎಸ್ ಆಫೀಸ್ ನಲ್ಲಿ ಕೆಲಸ ನಿರ್ವಹಿಸುವ ಅನುಭವ ಹೊಂದಿರಬೇಕು.

ಸ್ಟೋರ್ ಕೀಪರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷ, ಸೀನಿಯರ್ ಅಸಿಸ್ಟೆಂಟ್ ಹುದ್ದೆಗೆ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗದಿದೆ. 1/4/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ವರ್ಗದವರಿಗೆ 3 ವರ್ಷದ ವಿನಾಯಿತಿ ಇದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಡಿ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 500 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರಿಗೆ ಯಾವುದೇ ಶುಲ್ಕವಿರುವುದಿಲ್ಲ.
ಪ್ರಮುಖ ಅಂಶಗಳು
* ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ
* ಒಟ್ಟು ಹುದ್ದೆಗಳು 46
* ವೇತನ 22000 ರೂ.ಗಳು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications