ವಾಯುಪಡೆ ನೇಮಕಾತಿ; ಅಗ್ನಿವೀರ್ ನೋಂದಣಿಗೆ ಆಗಸ್ಟ್ 18 ಕೊನೆ ದಿನ
ಬಳ್ಳಾರಿ, ಜುಲೈ 28; ಭಾರತೀಯ ವಾಯುಪಡೆ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ನೋಂದಣಿಗೆ ಪ್ರಕಟಣೆ ಹೊರಡಿಸಿದೆ. ಅವಿವಾಹಿತ ಪುರುಷ, ಮಹಿಳಾ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಲು ಆಗಸ್ಟ್ 18 ಕೊನೆಯ ದಿನವಾಗಿದೆ.
ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಆನ್‍ಲೈನ್ ಮೂಲಕ ನೋಂದಣಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಸರು ನೋಂದಾಯಿಸುವ ಅಭ್ಯರ್ಥಿಯ ವಿದ್ಯಾರ್ಹತೆಯು ದ್ವಿತೀಯ ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ, ಇತರೆ ವಿಷಯಗಳಲ್ಲಿ)ಯಲ್ಲಿ ಶೇ.50 ರಷ್ಟು ಅಂಕ ಮತ್ತು ಇಂಗ್ಲಿಶ್‌ನಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ ಮಾಹಿತಿ; ಅರ್ಜಿ ಸಲ್ಲಿಕೆ ಮಾಡುವವರು 2003 ಜೂನ್ 27 ರಿಂದ 2006 ಡಿಸೆಂಬರ್ 27ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ನೋಂದಣಿ ಮಾಡಿಕೊಳ್ಳಲು ಕೊನೆಯ ದಿನ ಆಗಸ್ಟ್ 18.
ಆಸಕ್ತರು ಆನ್‍ಲೈನ್ ನೊಂದಣಿಗಾಗಿ https://agnipathvayu.cdac.in ಲಿಂಕ್ ಬಳಸಬಹುದಾಗಿದೆ. ಆನ್‍ಲೈನ್ ಪರೀಕ್ಷೆಯು ಅಕ್ಟೋಬರ್ 13 ರಂದು ನಡೆಯಲಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08392-273988 ಸಂಖ್ಯೆಗೆ ಕರೆ ಮಾಡಬಹುದು ಅಥವಾ https://careerindianairforce.cdac.in ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ.
ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ; ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ 'ಸಿ' ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್ ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459, ಕಛೇರಿಯನ್ನು ಸಂಪರ್ಕಿಸುವುದು.
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ; ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾ ಮತ್ತು ವೃತ್ತಿಪರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ರಾಜ್ಯ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಶುಲ್ಕ ರಹಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾವರೆಗೆ ವ್ಯಾಸಂಗ ಮಾಡಿತ್ತಿರುವವರು ಸೆಪ್ಟಂಬರ್ 30 ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08182-220925ಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications