Airport Authority Recruitment: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ
Airport Authority Recruitment: ದೇಶದಲ್ಲಿ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಇದೀಗ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಖಾಲಿ ಇರುವ 89 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಹೊಂದಿರಬೇಕಾದ ಅರ್ಹತೆಗಳೇನು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಕಿರಿಯ ಸಹಾಯಕ (Fire Services) 89 ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ aai.aero ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹಂತ I ಮತ್ತು ಹಂತ IIರ ಅಡಿಯಲ್ಲಿ ಆನ್‌ಲೈನ್ ನೋಂದಣಿ ಪೂರ್ಣಗೊಳಿಸಲು ಜನವರಿ 28, 2025 ಕೊನೇ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವವರು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ. ಜೊತೆಗೆ ಮೆಕ್ಯಾನಿಕಲ್, ಆಟೋಮೊಬೈಲ್ ಅಥವಾ ಅಗ್ನಿಶಾಮಕ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಮಾಡಿರಬೇಕು ಅಥವಾ 12ನೇ ತರಗತಿ ಉತ್ತೀರ್ಣರಾಗಿರಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?: ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದೆ, ಮೊದಲನೇ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮಾಡಲಾಗುತ್ತದೆ. ಸಮಯ 2 ಗಂಟೆಯಾಗಿರುತ್ತದೆ. ಸಾಮಾನ್ಯ, EWS ಮತ್ತು ಒಬಿಸಿ ವರ್ಗಕ್ಕೆ 100ಕ್ಕೆ ಶೇಕಡ 50ರಷ್ಟು ಅಂಕಗಳನ್ನು ಗಳಿಸಬೇಕು. ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳು 100ಕ್ಕೆ ಶೇಕಡ 40ರಷ್ಟು ಅಂಗಳನ್ನು ಗಳಿಸಬೇಕಾಗುತ್ತದೆ.
ಎರಡನೇ ಹಂತದಲ್ಲಿ CBT ಉತ್ತೀರ್ಣರಾದ ಬಳಿಕ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಬಳಿಕ ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ, ವಾಹನ ಚಾಲನಾ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಯು ಲೈಟ್, ಮೀಡಿಯಂ ಅಥವಾ ಹೆವಿ ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಲಾಗುತ್ತದೆ. ಅಲ್ಲದೆ, ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಲಾಗುತ್ತದೆ. ಈ ಪರೀಕ್ಷೆಗಳಲ್ಲಿ ಅಭ್ಯರ್ಥಿಯು ಕನಿಷ್ಠ 60 ಅಂಕಗಳನ್ನು ಗಳಿಸಬೇಕಾಗುತ್ತದೆ.
ಕೊನೆಯದಾಗಿ ಮೆರಿಟ್ ಪಟ್ಟಿಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 31,000-92,000ರ ವರೆಗೆ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್‌ಸೈಟ್ aai.aeroಗೆ ಭೇಟಿ ನೀಡಿ.
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿ.
* ಅಗತ್ಯ ವಿವರಗಳನ್ನು ತುಂಬಿ, ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
* ಬಳಿಕ ಫಾರ್ಮ್ ಅನ್ನು ಸಲ್ಲಿಕೆ ಮಾಡಿ ಅದನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು.












Click it and Unblock the Notifications