Anganawadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಜುಲೈ 30: ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬೇಕು.

ಎಲ್ಲೆಲ್ಲಿ ಖಾಲಿ ಇದೆ ಹುದ್ದೆಗಳು?
* ಶಿವಮೊಗ್ಗ: ಕಾರ್ಯಕರ್ತೆಯರು-34, ಸಹಾಯಕಿಯರು-118,
* ಭದ್ರಾವತಿ: ಕಾರ್ಯಕರ್ತೆಯರು -10, ಸಹಾಯಕಿಯರು -72
* ಹೊಸನಗರ: ಕಾರ್ಯಕರ್ತೆಯರು-07, ಸಹಾಯಕಿಯರು -35
* ಸಾಗರ: ಕಾರ್ಯಕರ್ತೆಯರು-21, ಸಹಾಯಕಿಯರು- 62
* ಶಿಕಾರಿಪುರ: ಕಾರ್ಯಕರ್ತೆಯರು-08, ಸಹಾಯಕಿಯರು -55
* ಸೊರಬ: ಕಾರ್ಯಕರ್ತೆಯರು-38, ಸಹಾಯಕಿಯರು -65
* ತೀರ್ಥಹಳ್ಳಿ: ಕಾರ್ಯಕರ್ತೆಯರು 09, ಸಹಾಯಕಿಯರು- 41
ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹುದ್ದೆಗಳಿಗೆ ನೇರ ಸಂದರ್ಶನ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಗಸ್ಟ್ 08 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.00 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಭಾಗವಹಿಸುವಂತೆ ಎನ್.ಸಿ.ಡಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವೈದ್ಯರಿಗೆ ವಿಶೇಷ ಸೂಚನೆ: ಪ್ರತಿ ತಿಂಗಳ 1, 10 ಮತ್ತು 20ನೇ ತಾರೀಕಿನಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ (ರಜೆ ಇರುವ ದಿನವಿದ್ದರೆ ನಂತರದ ದಿನದಲ್ಲಿ) ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220685 ನ್ನು ಸಂಪರ್ಕಿಸುವುದು.












Click it and Unblock the Notifications