Anganwadi ನೇಮಕಾತಿ: ಧಾರವಾಡದಲ್ಲಿ ಸಹಾಯಕಿ-ಕಾರ್ಯಕರ್ತೆಯರ ಉದ್ಯೋಗಗಳು ಖಾಲಿ ಇವೆ
ಧಾರವಾಡ, ಆಗಸ್ಟ್ 10: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಈ ಕುರಿತು ಆಗಸ್ಟ್ ಮೊದಲ ವಾರ ಪ್ರಕಟಣೆ ಹೊರಡಿಸಿರುವ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಧಾರವಾಡದಲ್ಲಿ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಸೇರಿದಂತೆ ಒಟ್ಟು 199 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಸರ್ಕಾರಿ ಹುದ್ದೆ ಪಡೆಯಲು ಇಚ್ಛಿಸುವ ಅರ್ಹ ಮಹಿಳೆಯರು ಮುಂದಿನ ಸೆಪ್ಟೆಂಬರ್ 02 ರವರೆಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಮಹಿಳಾ ಮತ್ತು ಮಕ್ಕಳ ಇಲಾಖೆ ಇತ್ತೀಚೆಗಷ್ಟೆ ರಾಜ್ಯದಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯನ್ನು ಮೊದಲ ಭಾರಿಗೆ ಆನ್‌ಲೈನ್ ಮೂಲಕ ನಡೆಯುತ್ತಿದೆ. ನಂತರ ಹಂತ ಹಂತವಾಗಿ ವಿಸ್ತರಣೆ ಮಾಡಲಿದೆ. ಸದ್ಯ ಧಾರವಾಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೇತನ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ಲಿಂಕ್, ಇನ್ನಿತರ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ತಿ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಇಲಾಖೆ, ಧಾರವಾಡ
ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ
ಕಾರ್ಯಕರ್ತೆ ಹುದ್ದೆ: 9
ಸಹಾಯಕಿ ಹುದ್ದೆ: 190
ಒಟ್ಟು ಹುದ್ದೆಗಳು: 199
ಪೋಸ್ಟಿಂಗ್: ಧಾರವಾಡ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟಂಬರ್ 02
ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ವಿದ್ಯಾರ್ಹತೆ ಏನಿರಬೇಕು?
ಧಾರವಾಡದ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ 8 ಮತ್ತು 10ನೇ (SSLC) ತರಗತಿ ಉತ್ತೀರ್ಣವಾಗಿರಬೇಕಾಗಿದ್ದು ಕಡ್ಡಾಯ. ಇನ್ನೂ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ SSLC ಅಥವಾ PUC, ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಮುಖ್ಯವಾಗಿ ಅರ್ಜಿದಾರರು ಜಿಲ್ಲೆಯ ನಿವಾಸಿಯಾಗಿರಬೇಕು.

ವಯೋಮಿತಿ ವಿವರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಧಾರವಾಡ ಅಧಿಸೂಚನೆ ಪ್ರಕಾರ, ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಇನ್ನೂ ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಇರುತ್ತದೆ.
ಮಾಸಿಕ ವೇತನ ಎಷ್ಟು?
ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ, ಆಯ್ಕೆ ಆಗುವ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲೆಯಲ್ಲಿ ಮಾಸಿಕ 3000 ರೂ.ನಿಂದ 5000ವರೆಗೆ ವೇತನ ಸಹಿತ ಪೋಸ್ಟಿಂಗ್ ನೀಡಲಾಗುವುದು. ಅದೇ ರೀತಿ ಸಹಾಯಕಿಯರ ಮಾಸಿಕ 1800 ರೂ.ನಿಂದ 3400 ರೂಪಾಯಿ ಇರಲಿದೆ. ದಾಖಲಾತಿಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ? ತಿಳಿಯಿರಿ
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೂ ಕಾಯದೇ ಈ ಕೂಡಲೇ ಸೂಕ್ತ ದಾಖಲೆಗಳ ಸಹಿತ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ನೀವು WCD ನೇಮಕಾತಿ ಅಧಿಕೃತ ವೆಬ್‌ಸೈಟ್ (https://karnemakaone.kar.nic.in/abcd/home.aspx) ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆ, ಮಾಹಿತಿ ನಮೂದಿಸಿ ಅರ್ಜಿ ಸಲ್ಲಿಕೆ ಆದ ಬಳಿಕ ಒಂದು ಪ್ರಿಂಟ್ ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.












Click it and Unblock the Notifications