Government Jobs: ಈ ಜಿಲ್ಲೆಯ 285 ಅಂಗನವಾಡಿ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟಂಬರ್ 20: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಶಿವಮೊಗ್ಗ, ದಾವಣಗೆರೆ, ಧಾರವಾಡ ಹೀಗೆ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ಆರಂಭಿಸಿದೆ. ಇದೀಗ ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 285 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಸೇರಬಯಸುವ ಆಸಕ್ತರು ಅಕ್ಟೋಬರ್ 19 ರೊಳಗೆ ಅರ್ಜಿ ಸಲ್ಲಿಸಬೇಕು.

ಹಾಗಾದರೆ ಆಸಕ್ತರು ಅರ್ಜಿ ಸಲ್ಲಿಸಲು ಏನು ಮಾಡಬೇಕು? ಅರ್ಜಿ ಸಲ್ಲಿಕೆ ಲಿಂಕ್, ವೇತನ ಎಷ್ಟು? ಹುದ್ದೆಗಳು, ನೇಮಕಾತಿ ಇತರ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಂಗನವಾಡಿ ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಒಟ್ಟು ಹುದ್ದೆಗಳು: 285
ಪೋಸ್ಟಿಂಗ್: ಚಿಕ್ಕಬಳ್ಳಾಪುರ
ಮಾಸಿಕ ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಅಕ್ಟೋಬರ್ 19
ಖಾಲಿ ಹುದ್ದೆಗಳ ಇತರ ಮಾಹಿತಿ ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು 54, ಮಿನಿ ಅಂಗನವಾಡಿ ಕಾರ್ಯಕರ್ತೆ 14 ಹಾಗೂ ಅಂಗನವಾಡಿ ಸಹಾಯಕಿಯರ ಒಟ್ಟು 217 ಹುದ್ದೆಗಳು ಖಾಲಿ ಇವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಹತೆ ಏನಿರಬೇಕು?
ಅಂಗನವಾಡಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಹಾಕುವವರಿಗೆ ಪಿಯುಸಿ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಆದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ.
ವಯೋಮಿತಿ ವಿವರ
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಗೆ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ 35 ವರ್ಷ ಆಗಿರಬೇಕು. ಜಾತಿ ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಇರಲಿದೆ. ಯಾವುದೇ ವರ್ಗದವರಿಗೂ ಅರ್ಜಿ ಶುಲ್ಕ ಇಲ್ಲ. ಸಂಪೂರ್ಣ ಉಚಿತವಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು ಎಂದು ಇಲಾಖೆ ನೇಮಕಾತಿ ತಿಳಿಸಿದೆ.
* ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮೆ, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ನೂರಾರು ಹುದ್ದೆಗಳಿಗೆ ಕೂಡಲೇ ಸೂಕ್ತ ದಾಖಲೆಗಳ ಸಹಿತ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀವು ಈ ಲಿಂಕ್ https://karnemakaone.kar.nic.in/abcd/ApplicationForm_JA_org.aspx ಮೇಲೆ ಕ್ಲಿಕ್ ಮಾಡಬೇಕಿದೆ.












Click it and Unblock the Notifications