ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿ; ವಿವರಗಳು
ಬೆಂಗಳೂರು, ಜನವರಿ 20; ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕರ್ನಾಟಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಶೀಘ್ರವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 1419 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.
ಸಹಾಯಕ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕರು, ಶೀಘ್ರಲಿಪಿಗಾರರು ಮತ್ತು ಇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. 10ನೇ ತರಗತಿ, ಪಿಯುಸಿ, ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಮೀನುಗಾರಿಗೆ ನಿರ್ದೇಶಕರು 1, ಮೀನುಗಾರಿಕೆ ಹೆಚ್ಚುವರಿ ನಿರ್ದೇಶಕರು 6, ಮೀನುಗಾರಿಗೆ ಜಂಟಿ ನಿರ್ದೇಶಕರು 12, ಸಹಾಯಕ ಇಂಜಿನಿಯರ್, ಮೀನುಗಾರಿಕೆ ಉಪ ನಿರ್ದೇಶಕರು (ಸೀನಿಯರ್ ಸ್ಕೇಲ್) 1, ಉಪ ನಿರ್ದೇಶಕರು (ಜ್ಯೂನಿಯರ್ ಸ್ಕೇಲ್) 7, ಸಹಕಾರ ಸಂಘಗಳ ಸಹಾಯಕ ನಿಬಂಧಕರು 1, ಸಹಾಯಕ ಇಂಜಿನಿಯರ್ ಶೀತಲೀಕರಣ 2, ಸೂಪರಿಟೆಂಡೆಂಟ್ 22, ಸಹಕಾರ ಸಂಘಗಳ ಹಿರಿಯ ನಿರೀಕ್ಷರು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಹಿರಿಯ ಮೀನುಗಾರಿಕಾ ಮೇಲ್ವಿಚಾರಕರು 33, ರೆಫ್ರಿಜರೇಶನ್ ಮ್ಯಾಕಾನಿಕ್ ಅಥವ ಪಂಪ್ ಆಪರೇಟರ್ 6, ಹಿರಿಯ ಟೈಪಿಸ್ಟ್ 4, ಮೆಕಾನಿಕ್ 1, ದ್ವಿತೀಯ ದರ್ಜೆ ಸಹಾಯಕರು 93, ಡೇಟಾ ಎಂಟ್ರಿ ಸಹಾಯಕ 48 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗತ್ತಿದೆ.
ವೇತನದ ವಿವರ; ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕರ್ನಾಟಕದ ನೇಮಕಾತಿ ನಿಯಮಗಳ ಅನ್ವಯ ಹುದ್ದೆಗಳಿಗೆ 17,000 ದಿಂದ 1,41,300 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ. https://ahf.karnataka.gov.in/english
ಅಪ್ರೆಂಟಿಸ್ ತರಬೇತಿ; ತಾಂತ್ರಿಕ ಶಿಕ್ಷಣ ಹಿನ್ನಲೆಯ ಹೊಸ ಪದವೀಧರರಿಗೆ ಸಿವಿಲ್ ಕಾಮಗಾರಿ ನಿರ್ವಹಣೆ, ನಗರ ಯೋಜನೆ, ಹಣಕಾಸು, ಪರಿಸರ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿ ಪಡೆಯಲು ಅನುವಾಗುವ ಟುಲಿಪ್ ಯೋಜನೆಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪದವೀಧರರು 5000 ರೂ. ಸ್ಟೈಫಂಡ್‍ನೊಂದಿಗೆ ಒಂದು ವರ್ಷ ಹಾಗೂ ಸ್ಟೈಫಂಡ್ ರಹಿತವಾಗಿ 3 ತಿಂಗಳ ಇಂಟರ್ನ್‍ಶಿಪ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯು ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿಯ ಸಹಯೋಗದೊಂದಿಗೆ ನಿರ್ವಹಿಸಲ್ಪಡುವ ಜಂಟಿ ಕಾರ್ಯಾಚರಣೆಯಾಗಿದೆ.
ಆಸಕ್ತ, ಅರ್ಹ ಪದವೀಧರರು 28/2/2022 ರೊಳಗೆ https://internship.aicte-india.org/ ಲಿಂಕ್ ಬಳಸಿ ಆನ್‍ಲೈನ್‍ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ವೆಬ್ ಸೈಟ್‌ನಲ್ಲಿ ಲಭ್ಯವಿದೆ.
ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಹಾಕಿ; ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ಈ ಹುದ್ದೆಗೆ ನೇಮಕಾತಿ ನಡೆಯುತ್ತಿದೆ. ಕಮಲಾಪುರ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘ(ಗುಂಪು)ಗಳ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಲ್ಲಿ ಸಮಿತಿಯ ನಿರ್ಣಯವೇ ಅಂತಿಮವಾಗಿದೆ.
ಒಂದು ಹುದ್ದೆಯಿದ್ದು ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ಗೌರವಧನ 8 ಸಾವಿರ ರೂ. ನೀಡಲಾಗುತ್ತದೆ. ಪ್ರಯಾಣ ಭತ್ಯೆ ರೂ.2 ಸಾವಿರ ರೂ. ಇದೆ. ಆಸಕ್ತರು ಅರ್ಜಿಗಳನ್ನು ಭರ್ತಿ ಮಾಡಿ ಜನವರಿ 27ರೊಳಗಾಗಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.
ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರತಕ್ಕದ್ದು), ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘದ (ಗುಂಪಿನಲ್ಲಿ) ಸದಸ್ಯರಾಗಿರತಕ್ಕದ್ದು.
ಆಂತರಿಕ ಸಾಲ ಪಡೆದು ಮರು ಪಾವತಿಸಿರಬೇಕು / ಚಾಲ್ತಿಯಲ್ಲಿರಬೇಕು ಸಾಲ ಮರು ಪಾವತಿಸದೇ ಸುಸ್ತಿದಾರರಾಗಿರಬಾರದು, ಯಾವುದೇ ಸರ್ಕಾರಿ/ ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು.
ಅಭ್ಯರ್ಥಿ ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಭಾಗವಹಿಸುವಂತಿರಬೇಕು, ಸ್ವ-ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ/ ಜಿಲ್ಲೆಗಳಲ್ಲಿ/ ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಕಾರ್ಯದ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ದರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ.












Click it and Unblock the Notifications