ಬೆಂಗಳೂರು: ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, 93 ಹುದ್ದೆ, ವೇತನ
ಬೆಂಗಳೂರು, ಮಾರ್ಚ್ 12: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು 93 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳು ಮಂಜೂರಾಗಿವೆ.
ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 28,425 ರಿಂದ 87,125 ರೂ. ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ, ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರತಕ್ಕದ್ದು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 55ರಷ್ಟು ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇಕಡ 50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರತಕ್ಕದ್ದು.
ಅಭ್ಯರ್ಥಿಗಳು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನವನ್ನು ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ
ನೀಡಲಾಗುತ್ತದೆ.
ಪ್ರಸ್ತುತ ಒಟ್ಟು ಹುದ್ದೆಗಳ ಸಂಖ್ಯೆ 93 ಇರುತ್ತವೆ. ನೇಮಕಾತಿ ಸಂದರ್ಭದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ, ಕಡಿಮೆ ಮಾಡುವ ಅಧಿಕಾರವನ್ನು ಬ್ಯಾಂಕ್ ಹೊಂದಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳು 40 ವರ್ಷ. ಇತರೆ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗ/ ಪ್ರವರ್ಗಗಳನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿಯನ್ನು ನೀಡಲಾಗುತ್ತದೆ.
ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 40 ವರ್ಷ. ಇತರೆ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗ/ ಪ್ರವರ್ಗಗಳನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿಯನ್ನು ನೀಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1000 ರೂ. + ಜಿಎಸ್‌ಟಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸದ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ. ಶುಲ್ಕವನ್ನು ಯಾವುದೇ ಸಂದರ್ಭದಲ್ಲಿ ವಾಪಸ್ ನೀಡಲಾಗುವುದಿಲ್ಲ.
ಅರ್ಜಿ ಕಡ್ಡಾಯವಾಗಿ https://www.emsecure.in/ApexBankApplication/index.html ಮೂಲಕವೇ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ತಪ್ಪದೇ ಓದಿಕೊಳ್ಳುವುದು.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 6/04/2024ರ ಸಾಯಂಕಾಲ 5.30. ತದನಂತರ ಸ್ವೀಕೃತವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಓರ್ವ ಅಭ್ಯರ್ಥಿ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸತಕ್ಕದ್ದು. ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿಗೆ UPLOAD ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು UPLOAD ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ karnatakaapex.com












Click it and Unblock the Notifications