ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, ಜನವರಿ 03: ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಿಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿ ಪರಿಷ್ಕ್ರತ ಮಾರ್ಗಸೂಚಿ, ಜಿಲ್ಲಾಧಿಕಾರಿ ಅನುಮೋದನೆಯಂತೆ ಶಿಶು ಅಭಿವೃದ್ಧಿ ಯೋಜನೆಗಳಡಿಯಲ್ಲಿ ಅರ್ಜಿ ಅಹ್ವಾನ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕಿನ 7 ಅಂಗನವಾಡಿ ಕಾರ್ಯಕರ್ತೆ, 60 ಅಂಗನವಾಡಿ ಸಹಾಯಕಿ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್ ಲೈನ್ ಮೂಲಕ ಆಸಕ್ತರು ಜನವರಿ 31 ರೊಳಗೆ ಅರ್ಜಿ ಸಲ್ಲಿಸಬೇಕು.

ಇತರ ಮಾಹಿತಿಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ ಅಥವಾ ದೂರವಾಣಿ 0836 2444838, 2440733 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಶೆಟ್ಟರ ತಿಳಿಸಿದರು.











Click it and Unblock the Notifications