ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; 51 ಹುದ್ದೆಗಳ ನೇಮಕ, ವೇತನ 60 ಸಾವಿರ ರೂ - ಇಲ್ಲಿದೆ ಸಂಪೂರ್ಣ ಮಾಹಿತಿ
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ 'ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.
ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ. ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್ ಆರಂಭಿಸಿರುವ ಪ್ರಮುಖ ಕಾರಣವಾಗಿದೆ.

ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನದಲ್ಲಿ ತೊಡಗಿಕೊಂಡು, ಸ್ಥಳೀಯ ಅಡಳಿತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಕ್ಷೇತ್ರಮಟ್ಟದ ಸ್ಥಿತಿ-ಗತಿ ಮತ್ತು ಕಲಿಕೆಗಳ ಅಧ್ಯಯನ ಮಾಡುವುದನ್ನು ಪ್ರಮುಖ ಹೊಣೆಯಾಗಿ ಈ ಯುವ ಸಮೂಹ ಹೊರಲಿದ್ದಾರೆ. ಕಾರ್ಯಕ್ರಮದ ಅವಧಿ ಎರಡು ವರ್ಷಗಳಾಗಿದ್ದು, ಆಯ್ಕೆಯದ ಫೆಲೊಗಳಿಗೆ ಮಾಸಿಕ 60,000 ರೂ. ಶಿಷ್ಯವೇತನ ನೀಡಲಾಗುವುದು.
ಫೆಲೋಗಳು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತಿ ಕಾರ್ಯನಿರ್ವಹಣೆ ಶ್ರೇಣೀಕರಣದಲ್ಲಿ ಕೊನೆಯಲ್ಲಿರುವ 10 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಚಟುವಟಿಕೆಗಳನ್ನು ಕೇಂದ್ರೀಕರಿಸಲಿದ್ದಾರೆ, ಅವಧಿ ಮುಗಿಯುವವರೆಗೆ ನಿಯುಕ್ತಿಗೊಳಿಸಲಾದ ತಾಲ್ಲೂಕಿನಲ್ಲಿಯೇ ವಾಸ್ತವ್ಯ ಹೂಡಬೇಕಲ್ಲದೆ, ಗ್ರಾಮ ಪಂಚಾಯತಿಗಳಿಗೆ ನಿರಂತರವಾಗಿ ಪ್ರವಾಸ ಕೈಗೊಂಡು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಎಂಬ ನಿಯಮವನ್ನು ಹಾಕಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ ಕಾರ್ಯ ಅಥವಾ ಸಾರ್ವಜನಿಕ ನೀತಿ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಭಾಷಾಜ್ಞಾನ ಕಡ್ಡಾಯ. 1-2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಾನ : ಅಭ್ಯರ್ಥಿಗಳ ವಯಸ್ಸು 32 ವರ್ಷಕ್ಕಿಂತ ಕಡಿಮೆ ಇರಬೇಕು.
ಆಯ್ಕೆ ವಿಧಾನ : ಫೆಲೋಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 22, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 05, 2024
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.












Click it and Unblock the Notifications