• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಾವಣಗೆರೆ: ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

|

ದಾವಣಗೆರೆ ಡಿ. 30: ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್‍ಲೈನ್ ಪ್ರಕಟಣೆ/ ಜಾಹಿರಾತು ಪ್ರಕಟಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜನವರಿ 20, 2021 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಅಂಚೆ ಇಲಾಖೆ ಕರ್ನಾಟಕ ವೃತ ನೇಮಕಾತಿ; 2443 ಹುದ್ದೆಗಳು

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ, ಪಾಸಾಗಿರಬೇಕು. ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 40 ವರ್ಷಗಳಾಗಿದೆ, ಅನುಸೂಚಿತ ಜಾತಿ, ಬುಡಕಟ್ಟು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್ ನಲ್ಲಿ ಸಲ್ಲಿಸಬೇಕಾಗಿರುತ್ತದೆ. ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ, ತೃತಿಯ ಲಿಂಗಿಗಳಿಗೆ ಮತ್ತು ಅನುಸೂಚಿತ ಜಾತಿ/ಬುಡಕಟ್ಟು ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನ್‍ಲೈನ್ ನಲ್ಲಿ ಮೂಲಕ ಮಾತ್ರ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು 2020 ರ ಜ. 20 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Applications invited for rural postal employee 2443 posts in Davanegere karnataka. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X