ದಾವಣಗೆರೆ: ಈ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ, ಆಗಸ್ಟ್, 09: ಜಿಲ್ಲೆಯ ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುದ್ದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾವೆಲ್ಲ ಹುದ್ದೆಗಳು ಖಾಲಿಯಿವೆ ಹಾಗೂ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಗಳೂರು ತಾಲ್ಲೂಕಿನಲ್ಲಿ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 28 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9, 2024 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು ವೆಬ್‌ಸೈಟ್ http://karnemakaone.kar.nic.in/abcd/ ಮತ್ತು http://dwcd.karnataka.gov.in ಸಲ್ಲಿಸಬಹುದು ಎಂದು ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹಾಗಾದರೆ ಅರ್ಜಿ ಆಹ್ವಾನಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆರಿಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ 19ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಖಾಲಿ ಹುದ್ದೆಗಳ ವಿವರ: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 08 ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 29 ಖಾಲಿ ಹುದ್ದೆಗಳಿವೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕಿ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ.
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 16 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 30 ಅಂಗನವಾಡಿ ಸಹಾಯಕಿ ಸೇರಿದಂತೆ 46 ಹುದ್ದೆಗಳು ಖಾಲಿ ಇವೆ. ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 4 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ 40 ಹುದ್ದೆಗಳು ಖಾಲಿ ಇದೆ.
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 09 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 24 ಹುದ್ದೆಗಳು ಖಾಲಿ ಇವೆ. ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 18 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಸೇರಿದಂತೆ 42 ಹುದ್ದೆಗಳು ಖಾಲಿಯಿವೆ.
ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 05 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 19 ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.











Click it and Unblock the Notifications