ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರದುರ್ಗದಲ್ಲಿ ನ್ಯಾಯಾಂಗ ತರಬೇತಿಗೆ ಅರ್ಜಿ ಆಹ್ವಾನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ, 26: ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರಿಗೆ ನ್ಯಾಯಾಂಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ 2022-23ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 10 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 12ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆ:

ಆಸಕ್ತರು ಚಿತ್ರದುರ್ಗ ಜಿಲ್ಲಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಭವವದಲ್ಲಿ ಅಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದು.

ಚಿತ್ರದುರ್ಗ: ಸತತ ತುಂತುರು ಮಳೆ ಹಿನ್ನೆಲೆ, ಹೊಸದುರ್ಗ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ ಚಿತ್ರದುರ್ಗ: ಸತತ ತುಂತುರು ಮಳೆ ಹಿನ್ನೆಲೆ, ಹೊಸದುರ್ಗ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು: ಅಭ್ಯರ್ಥಿಯು ಹಿಂದುಳಿದ ವರ್ಗಗಳ ವರ್ಗ-1, 2ಎ, 3ಎ, 3ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಆಯ್ಕೆ ಮಾಡಲಾಗುವ ಒಟ್ಟಾರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಲ್ಲಿ, ಶೇಕಡಾ 33.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಸೀಟುಗಳನ್ನು ಮೀಸಲಿಡಲಾಗುವುದು. ಅಭ್ಯರ್ಥಿಯು ಎಲ್.ಎಲ್.ಬಿ. ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಮೊದಲು ಎರಡು ವರ್ಷದ ಅವಧಿಯೊಳಗೆ ಪಾಸು ಮಾಡಿರಬೇಕು. ಸರ್ಕಾರದ ಆದೇಶ ಸಂ:ಎಸ್‍ಡಬ್ಲ್ಯೂಡಿ 132 ಎಸ್‍ಪಿಡಿ 97 ದಿನಾಂಕ 8-2-2000ರಂತೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು.

Application Invitation for judiciary Training in Chitradurga

ಉಲ್ಲೇಖ (3)ರ ಸರ್ಕಾರಿ ಆದೇಶದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ 2ಎ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ ಮಿತಿ 2,50,000 ರೂಪಾಯಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3,50,000ಗಳಿಗೆ ಆದಾಯದ ಮಿತಿ ನಿಗಧಿಪಡಿಸಲಾಗಿದೆ. ತರಬೇತಿ ಅವಧಿಯು 4 ವರ್ಷಗಳಾಗಿದ್ದು, ಅವಧಿಯಲ್ಲಿ ನಿಯಮಾನುಸಾರ ತರಬೇತಿ ಭತ್ಯೆ ಪಾವತಿಸಲಾಗುವುದು. ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಯ ಕನಿಷ್ಠ ವಯೋಮಿತಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 38 ವರ್ಷ ಮೀರಿರಬಾರದು. ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿರಬೇಕು. ಇಲ್ಲದಿದ್ದರೆ ಆಯ್ಕೆಯಾದ ತಕ್ಷಣ ಶಿಷ್ಯವೇತನ ಪಾವತಿಸಲು ಆಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿದ್ದರೆ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಅಲ್ಲದೆ ಶಿಷ್ಯವೇತನದ ಜೊತೆಗೆ ಶೇಕಡಾ 10ರಷ್ಟು ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು. ಮಧ್ಯದಲ್ಲಿ ತರಬೇತಿಯಿಂದ ಹಿಂದೆ ಸರಿದರೆ ಅವರು ಇಲಾಖೆಯಿಂದ ಪಡೆದ ಪೂರ್ಣ ಶಿಷ್ಯವೇತನವನ್ನು ಹಿಂದಿರುಗಿಸಬೇಕು.

Application Invitation for judiciary Training in Chitradurga

ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಪೂರ್ಣ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Recommended Video

Navya Pleading To Rajkumar Audio leak | ನನಿಗ್ ಯಾಕ್ ಮೋಸ ಮಾಡ್ದೆ !! ನವ್ಯ ಅಳಲು !! | *Politics | OneIndia

English summary
Applications are invited for judiciary training from unemployed law graduates belonging to Backward Class Category-1, 2A, 3A, 3B in Chitradurga District. Applications are invited from eligible candidates for 10 vacant posts for selection in the year 2022-23 under this scheme. August 12 is the last day to apply. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X