ಬೆಂಗಳೂರು: ₹60,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ ತಿಳಿಯಿರಿ
ಬೆಂಗಳೂರು, ಜನವರಿ, 22: ದಿನದಿಂದ ದಿನಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ವಿಸ್ತರಣೆ ಆಗುತ್ತಲೇ ಇದೆ. ಹೀಗೆ ವಿಸ್ತರಣೆ ಆದಂತೆಯೇ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಿವೆ. ಇದೀಗ ಬೆಂಗಳೂರಿಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ (NIHAN)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿ ಇವೆ, ಏನೆಲ್ಲ ಅರ್ಹತೆಗಳಿರಬೇಕು ಹಾಗೂ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಒಟ್ಟು 1 ಜೂನಿಯರ್ ಮೆಡಿಕಲ್ ಆಫೀಸರ್ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 31 ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಹುದ್ದೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವವರು ತಿಳಿದುಕೊಳ್ಳಬೇಕಾದ ಅಂಶಗಳು
1 ಜೂನಿಯರ್ ಮೆಡಿಕಲ್ ಆಫೀಸರ್ ಹುದ್ದು ಖಾಲಿ ಇದ್ದು, ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕ ವೇತನ ₹60,000 ನೀಡಲಾಗುತ್ತದೆ.
ಉದ್ಯೋಗದ ಸ್ಥಳ ಬೆಂಗಳೂರು ಆಗಿದೆ. ಇನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 31 ಆಗಿದ್ದು, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದೆ.
ನಿಮ್ಹಾನ್ಸ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂದರ್ಶನ ನಡೆಯುವ ಸ್ಥಳ: ಬೆಂಗಳೂರಿನ ನಿಮ್ಹಾನ್ಸ್‌ನ ಎಕ್ಸಿಕ್ಯೂಟಿವ್ ಚೇಂಬರ್ 2ನೇ ಮಹಡಿ, ನಿರ್ದೇಶಕರ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಇನ್ನು ನೋಟಿಫಿಕೇಶನ್ ಈಗಾಗಲೇ ಜನವರಿ 20ರಂದೇ ಬಿಡುಗಡೆಯಾಗಿದೆ.












Click it and Unblock the Notifications