ದಾವಣಗೆರೆ: ಈ ದೇವಸ್ಥಾನದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ ಇಲ್ಲಿದೆ
ದಾವಣಗೆರೆ, ಫೆಬ್ರವರಿ, 27: ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಈ ಹುದ್ದೆಗೆ ಏನೆಲ್ಲ ಅರ್ಹತೆಗಳು ಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕಾಗುತ್ತದೆ. 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ ಅಂತಾ ಡಿವಿಜಿ ಸುದ್ದಿ ವರದಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗುತ್ತಲೇ ಇವೆ. ಕೆಲವು ಕ್ಷೇತ್ರಗಳಲ್ಲಿ ವಜಾ ಮಾಡಿದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಉದ್ಯೋಗವಕಾಶದ ಬಾಗಿಲು ತೆರೆಯುತ್ತಲೇ ಇವೆ. ಇದೀಗ ದೇವಸ್ಥಾನಗಳಲ್ಲೂ ಕೂಡ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಆ ಹುದ್ದೆ ಯಾವುದು, ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಖಾಲಿಯಿದ್ದು, ಪೂರಕ ಸೇವೆಗಳನ್ನು ಒದಗಿಸಲು ಏಜನ್ಸಿಗಳಿಗೆ ಟೆಂಡರ್ ಕರೆಯಲಾಗಿದೆ. ಇದರ ನೋಟಿಫಿಕೇಷನ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಈ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) ಪ್ರಾಣಿ, ಪಕ್ಷಿಗಳನ್ನು ಹೆದರಿಸುವ ಮತ್ತು ಪೂರಕ ಸೇವೆಗಳನ್ನು ಒದಗಿಸುವ ಕೆಲಸಕ್ಕೆ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿದೆ.












Click it and Unblock the Notifications