ವಿಜಯನಗರ: ಸ್ಟಾಫ್ ನರ್ಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ, ಫೆಬ್ರವರಿ 14: ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 9 ಸ್ಟಾಫ್ ನರ್ಸ್​​ ಹುದ್ದೆಗಳು ಖಾಲಿ ಇದ್ದು, ಬಿ.ಎಸ್ಸಿ ನರ್ಸಿಂಗ್, ಎಂ.ಎಸ್ಸಿ, GNM​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ballari.nic.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗಿದ್ದು, ಈ ಎಲ್ಲದರ ಕುರಿತಾದ ಮಾಹಿತಿ ಇಲ್ಲಿದೆ.

Application Invite for 9 Staff Nurse Posts in Vijayanagara District Health Dept

ಹುದ್ದೆಯ ಹೆಸರು: ಸ್ಟಾಫ್ ನರ್ಸ್
ಒಟ್ಟು ಹುದ್ದೆಗಳು: ​ 09
ವಿದ್ಯಾರ್ಹತೆ: ಬಿಎಸ್ಸಿ, ಎಂಎಸ್ಸಿ, ಜಿಎನ್​ಎಂ
ಉದ್ಯೋಗದ ಸ್ಥಳ: ವಿಜಯನಗರ
ವೇತನ: ಮಾಸಿಕ 14,000 ರೂ.
ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/02/2022
ಸಂದರ್ಶನ ನಡೆಯುವ ದಿನಾಂಕ: 18/02/2022

ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ವಿಜಯನಗರ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ನರ್ಸಿಂಗ್, ಎಂ.ಎಸ್ಸಿ, ಜಿಎನ್​ಎಂ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ವಿಜಯನಗರ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20ರಿಂದ 40 ವರ್ಷದೊಳಗಿರಬೇಕು.

ವೇತನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ವಿಜಯನಗರ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ನರ್ಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 14,000 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​, ಲಿಖಿತ ಪರೀಕ್ಷೆ ನಂತರ ಸಂದರ್ಶನ ನಡೆಸಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+