'ನಮ್ಮ ಕ್ಲಿನಿಕ್'ಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 28: ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ ನೂತನವಾಗಿ ಸ್ಥಾಪಿಸಲಾಗುವ 'ನಮ್ಮ ಕ್ಲಿನಿಕ್'ಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
'ನಮ್ಮ ಕ್ಲಿನಿಕ್'ಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆಗೆ 1 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತಿವುಳ್ಳ ಎಂಬಿಬಿಎಸ್ ಪದವಿ ಮತ್ತು ಕೆಎಂಸಿ ಕೌನ್ಸಿಲ್ ನೋಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 ಕಟ್ಟಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560 002 ಇಲ್ಲಿಗೆ ಅಭ್ಯರ್ಥಿಗಹಳು ಅರ್ಜಿ ಸಲ್ಲಿಸಬಹುದು. ಹೀಗೆಂದು ಬಿಬಿಎಂಪಿ ಆರೋಗ್ಯಾಧಿಯಾದ ಡಾ. ಬಾಲಸುಂದರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ
ಕರ್ನಾಟಕ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಸರ್ಕಾರ ಕಿವುಡರಿಗೆ ಶ್ರವಣಸಾಧನವನ್ನು ಉಚಿತವಾಗಿ ನೀಡಲಾಗುತ್ತಿದೆ. ಅದಕ್ಕಾಗಿ 500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಡಯಾಲಿಸಿಸ್ 60 ಸೈಕಲ್ಸ್‌ಗಳಿಗೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ರಾಜ್ಯದ ಎಲ್ಲ ನಗರಗಳಲ್ಲಿ ನಮ್ಮ ಕ್ಲಿನಿಕ್ ನ್ನು ಸ್ಥಾಪಿಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.












Click it and Unblock the Notifications